SUDDIKSHANA KANNADA NEWS/ DAVANAGERE/ DATE:31-01-2025
ದಾವಣಗೆರೆ: ಚನ್ನಗಿರಿಯ ಮೆಡಿಕಲ್ ಸ್ಟೋರ್ ಮಾಲೀಕ ಅಮ್ಮದ್ ಕಾಮಪುರಾಣ ಬಟಾಬಯಲಾಗಿದೆ. ಈಗ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬರುತ್ತಿದ್ದು, ಈತನ ಲ್ಯಾಪ್ ಟಾಪ್ ಹಾಗೂ ಮೊಬೈಲ್ ನಲ್ಲಿ 30ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.
30 ಕ್ಕೂ ಅಧಿಕ ಮಹಿಳೆಯರು, ಕಾಲೇಜು ಯುವತಿಯರು ಹಾಗೂ ವಿದ್ಯಾರ್ಥಿನಿಯರ ಜೊತೆ ಲೈಂಗಿಕ ಕ್ರಿಯೆ ನಡೆಸಿ ವಿಡಿಯೋ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈಗ ಒಂದೆರಡು ವಿಡಿಯೋಗಳು ವೈರಲ್ ಆಗಿದ್ದು, ಇದು ಪೊಲೀಸರಿಗೆ ಸಿಕ್ಕಿದೆ.
ದಾವಣಗೆರೆ ನಗರದ 56 ವರ್ಷದ ಅಮ್ಜದ್ ವಿಕೃತ ಕಾಮುಕ. ಶಾಲಾ ಮಕ್ಕಳು, ಕಾಲೇಜು ಯುವತಿಯರು, ಮಹಿಳೆಯರ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎನ್ನಲಾಗಿದೆ. ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ 30ಕ್ಕೂ ಅಧಿಕ ವಿಡಿಯೋಗಳು ಇವೆ ಎಂದು ತಿಳಿದು ಬಂದಿದೆ.
ಮೆಡಿಕಲ್ ಶಾಪ್ ಗೆ ಬರುವ ಮಹಿಳೆಯರು ,ವಿದ್ಯಾರ್ಥಿಗಳನ್ನು ಪರಿಚಯ ಮಾಡಿಕೊಂಡು ಹಣದ ಆಸೆ ಅಥವಾ ಆಮೀಷವೊಡ್ಡಿ ಪುಸಲಾಯಿಸಿ ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುತ್ತಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಹಣದ ಸಹಾಯ ಮಾಡಿ ಲೈಂಗಿಕ ಕ್ರಿಯೆಯಗೆ ತೊಡಗಿಸಿಕೊಳ್ಳುತ್ತಿದ್ದ ಕಾಮುಕನು ಇದಕ್ಕಾಗಿ ಚನ್ನಗಿರಿ ಪಟ್ಟಣದಲ್ಲಿ ಮನೆ ಮಾಡಿಕೊಂಡಿದ್ದ ಎಂದೂ ಹೇಳಲಾಗಿದೆ.
ಸುಮೋಟೊ ಕೇಸ್ ದಾಖಲಿಸಿಕೊಂಡು ಅಮ್ಜದ್ ನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ. ಸಂತ್ರಸ್ತೆಯರ ಕುಟುಂಬ ಸಂಪರ್ಕಿಸುವ ಕೆಲಸ ನಡೆಯುತ್ತಿದ್ದು, ಶಾಲಾ ಬಾಲಕಿಯರ ಜೊತೆಗೂ ಈತ ಲೈಂಗಿಕ ಕ್ರಿಯೆ ನಡೆಸಿ ಅಶ್ಲೀಲ ವಿಡಿಯೋ ಮಾಡಿದ್ದಾನೆ. ಈತನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗುವ ಸಾಧ್ಯತೆ ಹೆಚ್ಚಿದೆ.