ಬೆಂಗಳೂರು: ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್ (ONGC) ದೇಶಾದ್ಯಂತ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 3,047 ಅಪ್ರೆಂಟಿಸ್ (Apprentice) ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. 10ನೇ ತರಗತಿ, 12ನೇ ತರಗತಿ, ಐಟಿಐ (ITI), ಡಿಪ್ಲೋಮಾ ಅಥವಾ ಪದವಿ ಪೂರ್ಣಗೊಳಿಸಿದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ನಪ್ಸ್ (NAPS) ಅಥವಾ ನಾಟ್ಸ್ (NATS) ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅಕ್ಟೋಬರ್ 29, 2026ರಂದು ಪ್ರಾರಂಭವಾಗಿರುವ ಆನ್ಲೈನ್ ಅರ್ಜಿ ಪ್ರಕ್ರಿಯೆಯು ನವೆಂಬರ್ 20, 2026ರ ವರೆಗೆ ಚಾಲ್ತಿಯಲ್ಲಿರುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ 12 ತಿಂಗಳ ತರಬೇತಿ ಅವಧಿಯಲ್ಲಿ ಹುದ್ದೆಯಾರ್ಹತೆಗೆ ಅನುಗುಣವಾಗಿ ಮಾಸಿಕ ರೂ. 8,200 ರಿಂದ ರೂ. 12,300 ರವರೆಗೆ ಸ್ಟೈಫಂಡ್ (Stipend) ನೀಡಲಾಗುತ್ತದೆ.
ಹುದ್ದೆಗಳ ವಿಭಾಗವಾರು ವಿವರ: ಒಟ್ಟು 3,047 ಅಪ್ರೆಂಟಿಸ್ ಹುದ್ದೆಗಳಿದ್ದು, ಪಶ್ಚಿಮ ವಲಯದಲ್ಲಿ ಅತಿ ಹೆಚ್ಚು (1166), ಪೂರ್ವ ವಲಯದಲ್ಲಿ 674, ಮುಂಬೈ ವಲಯದಲ್ಲಿ 482 ಹಾಗೂ ದಕ್ಷಿಣ ವಲಯದಲ್ಲಿ 267 ಹುದ್ದೆಗಳನ್ನು ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ ಮತ್ತು ವಯೋಮಿತಿ: 18 ರಿಂದ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು (ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಅನ್ವಯ) ಅರ್ಜಿ ಸಲ್ಲಿಸಬಹುದು. 10ನೇ ತರಗತಿ, 12ನೇ ತರಗತಿ, ಐಟಿಐ, ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಹತೆ ಕಡ್ಡಾಯವಾಗಿದೆ.
ಆಯ್ಕೆ ಪ್ರಕ್ರಿಯೆ: ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಬದಲಾಗಿ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇರೆಗೆ (Merit-Based Selection) ತಾತ್ಕಾಲಿಕ ಆಯ್ಕೆ ಪಟ್ಟಿ ತಯಾರಿಸಿ ದಾಖಲೆ ಪರಿಶೀಲನೆ ನಡೆಸಲಾಗುತ್ತದೆ.
ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿಲ್ಲದಿರುವುದರಿಂದ, ಅಧಿಕೃತ ವೆಬ್ಸೈಟ್ ongcindia.com ಮೂಲಕ ಅಥವಾ ನಿರ್ದಿಷ್ಟ ಅಪ್ರೆಂಟಿಸ್ ಪೋರ್ಟಲ್ಗಳ ಮೂಲಕ ಮಾತ್ರ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು.





Leave a comment