ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಉತ್ಪಾದನೆಯಲ್ಲಿ ಭಾರಿ ಕುಸಿತ; ಗ್ರಾಹಕರಿಗೆ ಈರುಳ್ಳಿ ದರ ಏರಿಕೆ ಬಿಸಿ!

On: September 18, 2024 11:35 AM
Follow Us:
---Advertisement---

ಬೆಂಗಳೂರು:- ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತಿರುವ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಹೀಗಾಗಿ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ. ಹೀಗಾಗಿ ದರ ಗಗನಕ್ಕೇರಿದೆ.

ದಿನದಿಂದ ದಿನಕ್ಕೆ ಸಾಮಾನ್ಯ ಜನರ ಬದುಕು ದುಬಾರಿಯಾಗುತ್ತಿದೆ. ಅಗತ್ಯ ವಸ್ತುಗಳ‌ ಬೆಲೆ‌ ಏರಿಕೆಯಾಗುತ್ತಿದ್ದು, ಬಡವರು ಮಧ್ಯಮ ವರ್ಗದವರು ಜೀವನ ನಡೆಸುವುದೇ ಕಷ್ಟವಾಗಿ ಹೋಗಿದೆ.‌ ಈ ಮಧ್ಯೆ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ಗ್ರಹಾಕರಿಗೆ ಕಣ್ಣೀರು ತರಿಸುತ್ತಿದೆ. ಸದ್ಯ ಕರ್ನಾಟಕದ ಹಲವೆಡೆ ಅತಿಯಾದ ಮಳೆಯ ಕಾರಣ ಬೆಳೆ ನೀರು‌ಪಾಲಗುತ್ತಿದ್ದರೆ, ಮತ್ತೊಂದೆಡೆ ಈರುಳ್ಳಿ ಮಳೆಯಿಂದಾಗಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ.

ಹೀಗಾಗಿ ಹಬ್ಬದ ವಾರದಲ್ಲಿ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗ 60 ರಿಂದ 70 ರೂಪಾಯಿ ಆಗಿದೆ. ದಸರಾ ವೇಳೆಗೆ ಈರುಳ್ಳಿಯ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಈ ಹಿಂದೆ ಉತ್ತರ ಕರ್ನಾಟಕ ಭಾಗದಿಂದ ಈರುಳ್ಳಿ ರಾಜ್ಯಕ್ಕೆ ಪೂರೈಕೆಯಾಗುತ್ತಿತ್ತು. ಆದರೆ, ಈಗ ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಮಳೆಗೆ ಈರುಳ್ಳಿ ಕೊಳೆತು ಹೋಗುತ್ತಿದೆ. ಹೀಗಾಗಿ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ.

Join WhatsApp

Join Now

Join Telegram

Join Now

Leave a Comment