ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆ ಸೇರಿ ಹತ್ತು ಜಿಲ್ಲೆಗಳ ಅಭ್ಯರ್ಥಿಗಳಿಂದ ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಅಹ್ವಾನ

On: March 14, 2025 1:29 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:14-03-2025

ಶಿವಮೊಗ್ಗ: ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಆನ್‌ಲೈನ್ ನೋಂದಣಿಯು ಮಾರ್ಚ್ 12 ರಿಂದ ಏಪ್ರಿಲ್ 10 ರವರೆಗೆ ಇರುತ್ತದೆ. ನೋಂದಣಿ ಪೊರ್ಟಲ್- WWW.JOININDINARMY.NIC.IN ಹಾಗೂ ಆನ್‌ಲೈನ್ ಪರೀಕ್ಷೆಯು ಜೂನ್ 2025 ರಲ್ಲಿ ನಡೆಯುವ ಸಾಧ್ಯತೆಯಿದ್ದು, ದಿನಾಂಕವನ್ನು ನಂತರ ಪ್ರಕಟಿಸಲಾಗುವುದು.

ಭಾರತೀಯ ಸೇನೆಯಲ್ಲಿ ಆಯ್ಕೆ ‘ನ್ಯಾಯಯುತ ಮತ್ತು ಪಾರದರ್ಶಕ’ವಾಗಿದ್ದು, ಅರ್ಹತೆ ಮೇಲೆ ಮಾತ್ರ ನಡೆಯುತ್ತದೆ. ಯಾವುದೇ ಹಂತದಲ್ಲಿ ಭಾರತೀಯ ಸೇನೆಯಲ್ಲಿ ಆಯ್ಕೆ ಅಥವಾ ನೇಮಕಾತಿಗಾಗಿ ಯಾರಿಗೂ ಲಂಚ ನೀಡಬಾರದು ಹಾಗೂ ನೇಮಕಾತಿ ಏಜೆಂಟ್‌ಗಳAತೆ ನಟಿಸುವ, ಆಮಿಷ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದೆಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂರವಾಣಿ ಸಂಖ್ಯೆ- 0824-2951279 ಹಾಗೂ ಇಮೇಲ್: aromangalore2021@gmail.comಗೆ ಸಂಪರ್ಕಿಸಬಹುದಾಗಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment