SUDDIKSHANA KANNADA NEWS/ DAVANAGERE/ DATE:27-10-2023
ದಾವಣಗೆರೆ : ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ಲೈನ್
ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್ಸೈಟ್ ಅಥವಾ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ದಾವಣಗೆರೆ ದೂ.ಸಂ 08192-230934 ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪರು ತಿಳಿಸಿದ್ದಾರೆ.
ನಾಮ ನಿರ್ದೇಶಿತ ಸದಸ್ಯರ ಆಯ್ಕೆಗೆ ಅರ್ಜಿ ಆಹ್ವಾನ:
ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಫಲಾನುಭವಿಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಲಾಗುತ್ತಿದ್ದು, ಆಯ್ಕೆ ಸಮಿತಿ ಸಭೆಯಲ್ಲಿ ಒಬ್ಬ ನಾಮನಿರ್ದೇಶಕ ಸದಸ್ಯರನ್ನು ಆಯ್ಕೆ ಮಾಡಲು ವಿಶ್ವಕರ್ಮ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎರಡು ವರ್ಷಗಳವರೆಗೆ ಅಧಿಕಾರೇತರ ನಾಮನಿರ್ದೇಶಕ ಸದಸ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ವಿಶ್ವಕರ್ಮ ಸಮುದಾಯದ ಜನಾಂಗದವರ ಪ್ರತಿನಿಧಿತ್ವ ವಹಿಸಿ ಸಮಾಜಮುಖಿ ಕೆಲಸ ನಿರ್ವಹಿಸಿರುವ ಅಭ್ಯರ್ಥಿಗಳು ನಾಮ ನಿರ್ದೇಶಕ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಬಹುದು.
ಅರ್ಹರು ನವಂಬರ್ 10 ರೊಳಗಾಗಿ ಜಿಲ್ಲಾ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.