SUDDIKSHANA KANNADA NEWS/ DAVANAGERE/ DATE:18-01-2025
ದಾವಣಗೆರೆ: ಜನವರಿ 20 ರಂದು ಮಧ್ಯಾಹ್ನ 1 ಗಂಟೆಗೆ ನಗರದ ಅರುಣ ಟಾಕೀಸ್ ಹತ್ತಿರ, ಕಿತ್ತೂರು ರಾಣಿ ಚನ್ನಮ್ಮ ವೃತ್ತ, ಪಶು ವೈದ್ಯಕೀಯ ಇಲಾಖೆಯ ಮುಂಭಾಗದಲ್ಲಿರುವ ಅಕ್ಕ ಕೆಫೆಯ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ.
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಗಣಿ, ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಶರಣಪ್ರಕಾಶ ರುದ್ರಪ್ಪ ಪಾಟೀಲ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ ಖರ್ಗೆ ಉದ್ಘಾಟಿಸುವರು.
ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಡಿ.ಎಸ್ ಅರುಣ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಅಸಗೋಡು ಜಯಸಿಂಹ, ಕರ್ನಾಟಕ ರಾಜ್ಯ ತಾಂಡ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷರಾದ ಜಯದೇವನಾಯ್ಕ, ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ದಿ ಆಯುಕ್ತರಾದ ಉಮಾ ಮಹದೇವನ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಫರ್ವೇಜ್, ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಏಕ್ ರೂಪ್ ಕೌರ್, ತೋಟಗಾರಿಕೆ, ರೇಷ್ಮೇ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಭಿಯಾನ ನಿರ್ದೇಶಕರಾದ ಪಿ.ಐ.ಶ್ರೀವಿದ್ಯಾ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿಲ್ಲಾ ಪೊಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್ ಉಪಸ್ಥಿತರಿರುವರು.