SUDDIKSHANA KANNADA NEWS/ DAVANAGERE/ DATE:06-03-2024
ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆಯಿಂದ ಮಂಜೂರಾದ 119 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ಈ ಪೈಕಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ದಾವಣಗೆರೆ ಮಹಾನಗರಪಾಲಿಕೆಯ ವೆಬ್ಸೈಟ್ www.davanagerecity.mrc.gov.in ನಲ್ಲಿ ಪ್ರಕಟಿಸಲಾಗಿದೆ. ಈ ಆಯ್ಕೆ ಪಟ್ಟಿಯಿಂದ ಬಾಧಿತರಾಗುವ ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಗಳಿದ್ದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ 15 ದಿನಗಳೊಗಾಗಿ ಆಯುಕ್ತರ ಕಚೇರಿ, ಮಹಾನಗರಪಾಲಿಕೆ ದಾವಣಗೆರೆ ಇಲ್ಲಿಗೆ ಸಲ್ಲಿಸಬಹುದು ಎಂದು ಆಯುಕ್ತರು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರಾದ ರೇಣುಕಾ ತಿಳಿಸಿದ್ದಾರೆ.