Site icon Kannada News-suddikshana

ಯುವನಿಧಿ ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ

SUDDIKSHANA KANNADA NEWS/ DAVANAGERE/ DATE-03-05-2025

ದಾವಣಗೆರೆ: ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರಸ್ತುತ ಮಾಸಿಕವಾಗಿ ದಾಖಲಿಸುತ್ತಿರುವ ಸ್ವಯಂ ಘೋಷಣೆಯ ಬದಲಾಗಿ, ಇನ್ನು ಮುಂದೆ (ಮಾರ್ಚ್, ಏಪ್ರಿಲ್ ಮತ್ತು ಮೇ-2025ರವರೆಗಿನ) ತ್ರೈಮಾಸಿಕ ಸ್ವಯಂ ಘೋಷಣೆಯನ್ನು ಮೇ1 ರಿಂದ ಮೇ.25 ರೊಳಗಾಗಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯಡಿಯಲ್ಲಿ 2023 ಹಾಗೂ 2024ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೊಮೋ ಅರ್ಹತೆ ಹೊಂದಿದವರು ಯುವನಿಧಿ ಯೋಜನೆಯ ನಿರುದ್ಯೋಗಿ ಭತ್ಯೆ ಪಡೆಯಲು ಸೇವಾ ಸಿಂಧು ಪೋರ್ಟಲ್ ಅಥವಾ ದಾವಣಗೆರೆ ಒನ್, ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ನಿಗದಿಯಾಗಿರುವುದಿಲ್ಲ.

ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಡಿ. ರವೀಂದ್ರ ತಿಳಿಸಿದ್ದಾರೆ.

Exit mobile version