ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ವಿರೋಧ ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು: ಮೊಹಮ್ಮದ್ ಜಿಕ್ರಿಯಾ

On: August 29, 2025 12:07 PM
Follow Us:
ದಸರಾ
---Advertisement---

SUDDIKSHANA KANNADA NEWS/ DAVANAGERE/DATE:29_08_2025

ದಾವಣಗೆರೆ: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದು ಅಭಿನಂದನಾರ್ಹ. ಜಾತಿ, ಧರ್ಮದ ಸಂಕೋಲೆಯನ್ನು ಮೀರಿ ವಿಶ್ವಕ್ಕೆ ಕನ್ನಡ ನಾಡಿನ ಸಾಂಸ್ಕೃತಿಕ, ಪರಂಪರೆ ಹಾಗೂ ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸಿದ ಲೇಖಕಿ ಅವರಿಂದ ಚಾಲನೆಗೊಳ್ಳುತ್ತಿರುವುದು ಅರ್ಥಪೂರ್ಣ ಎಂದು ಜವಾಹರ್ ಬಾಲ್ ಮಂಚ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿಯನ್ನೂ ಓದಿ: “ಅಫ್ಜಲ್ ಗುರು ವಧೆ ಮಾಡುವ ಶಿವಾಜಿ ಮಹಾರಾಜರ ಪೋಸ್ಟರ್”: ತೆರವಿಗೆ ಪೊಲೀಸರು ಬರುತ್ತಿದ್ದಂತೆ ಮಟಿಕಲ್ ನಲ್ಲಿ ಉದ್ವಿಗ್ನ ವಾತಾವರಣ!

ದಸರಾ ಉದ್ಘಾಟನೆಗೆ ಬಾನು ಅವರ ಆಯ್ಕೆಯನ್ನು ಅವರ ಜಾತಿ ಧರ್ಮದ ಕಾರಣದಿಂದ ಕೆಲವರು ವಿರೋಧಿಸುತ್ತಿರುವುದು ನಾಗರೀಕ ಸಮಾಜವು ನಾಚಿಕೆಯಿಂದ ತಲೆತಗ್ಗಿಸುವಂತಾಗಿದೆ. ಇನ್ನಾದರೂ ಜಾತಿ, ಧರ್ಮಗಳ
ನಡುವೆ ವಿಷಬೀಜ ಬಿತ್ತುವ ಪಿತೂರಿಗಳು ನಿಲ್ಲಲಿ. ಜಾತ್ಯಾತೀತ ಮತ್ತು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಅಶಾಂತಿ ಉಂಟು ಮಾಡುವ ಮನಸ್ಸುಗಳು ಮೊದಲು ಸ್ವಚ್ಛಗೊಳಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ತಿಳಿಸಿದ್ದಾರೆ.

ಭಾರತ ವಿಧತೆಯಲ್ಲಿ ಏಕತೆ ಹೊಂದಿರುವ ದೇಶ. ಸದ್ಯದ ಪರಿಸ್ಥಿತಿಯಲ್ಲಿ ಬೇಕಾಗಿರುವುದು ಹಿಂದೂ ಮತ್ತೂ ಮುಸ್ಲಿಮರ ನಡುವೆ ಪರಸ್ಪರ ಗೌರವ. ಬಾನು ಮುಷ್ಚಾಕ್ ಅವರು ಉದ್ಘಾಟನೆ ಮಾಡುತ್ತಿರುವುದು ನಾಡಹಬ್ಬ ದಸರಾ ಉತ್ಸವಕ್ಕೆ ವಿನಾ ನವರಾತ್ರಿ ಉತ್ಸವವನ್ನಲ್ಲ. ಅದಕ್ಕಾಗಿಯೇ ಅವರ ಆಯ್ಕೆಯನ್ನು ಯದುವಂಶದ ಮಹಾರಾಜರು ಕೂಡ ಸ್ವಾಗತಿಸಿದ್ದಾರೆ. ಮೈಸೂರು ದಸರಾ ಹಬ್ಬವನ್ನು ನಾಡಹಬ್ಬವೆಂದು ಗುರುತಿಸಿದ ಮೇಲೆ ಅದೂ ಕೇವಲ ಒಂದು ಜನಾಂಗಕ್ಕೆ ಒಂದು ಜಾತಿ ಧರ್ಮಕ್ಕೆ ಮಾತ್ರ ಸೀಮಿತವಲ್ಲ, ಅದೂ ನಾಡಿನಲ್ಲಿರುವ ಪ್ರತಿಯೊಬ್ಬರ, ಎಲ್ಲ ಜನಾಂಗದವರ ಎಲ್ಲರ ಹಬ್ಬ ಎಂದು ಹೇಳಿದ್ದಾರೆ.

ಈ ಹಿಂದೆ ನಿತ್ಯೋತ್ಸವ ಕವಿ ಕೆ. ಎಸ್. ನಿಸಾರ್ ಅಹ್ಮದ್ ಅವರು ಕೂಡ ದಸರಾ ಉದ್ಘಾಟಿಸಿದ್ದರು. ತನ್ವಿರ್ ಸೇಠ್ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಚಾಮುಂಡೇಶ್ವರಿ ಗರ್ಭ ಗುಡಿಗೆ ತೆರಳಿ ಪೂಜೆ ಸಲ್ಲಿಸಿದ್ದರು. ಮೈಸೂರಿನಲ್ಲಿರುವ ಅನೇಕ ಮಸೀದಿಗಳನ್ನು ನಿರ್ಮಿಸಿರುವುದು ಮೈಸೂರು ಮಹಾರಾಜರೇ. ಹಾಗಾಗಿ, ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆಗೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಮೊಹಮ್ಮದ್ ಜಿಕ್ರಿಯಾ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment