SUDDIKSHANA KANNADA NEWS/ DAVANAGERE/ DATE:08-02-2024
ದಾವಣಗೆರೆ: ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ನೂತನ ಜಿಲ್ಲಾ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಪದಗ್ರಹಣ ” ಕಾರ್ಯಕ್ರಮ ಹದಡಿ ರಸ್ತೆಯಲ್ಲಿನ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಫೆ. 8ರಂದು ನಡೆಯಲಿದೆ.
ನೂತನ ಜಿಲ್ಲಾಧ್ಯಕ್ಷರಾಗಿ ಎನ್. ರಾಜಶೇಖರ್, ಪ್ರಧಾನ ಕಾರ್ಯದರ್ಶಿಗಳಾಗಿ ಕಡ್ಲೇಬಾಳು ಧನಂಜಯ್, ಅನಿಲ್ ಕುಮಾರ್ ನಾಯ್ಕ್. ಐರಣಿ ಅಣ್ಣೇಶಿ ಅಧಿಕಾರ ಸ್ವೀಕರಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಮಾಜಿ ಉಪಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ, ದಾವಣಗೆರೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.