SUDDIKSHANA KANNADA NEWS/ DAVANAGERE/ DATE-30-04-2025
ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮೂಲಗಳ ಪ್ರಕಾರ, ಪಹಲ್ಗಾಮ್ನಲ್ಲಿ ದಾಳಿ ನಡೆಸಲು ಪಾಕಿಸ್ತಾನ ಮೂಲದ ಭಯೋತ್ಪಾದಕರಿಗೆ ಸಹಾಯ ಮಾಡುವಲ್ಲಿ ಲಷ್ಕರ್-ಎ-ತೈಬಾದ ಉನ್ನತ ಕಮಾಂಡರ್ ಫಾರೂಕ್ ಅಹ್ಮದ್ನ ಜಾಲವು ಪ್ರಮುಖ ಪಾತ್ರ ವಹಿಸಿದೆ ಎಂದು ಎನ್ ಐ ಎ ಮೂಲಗಳು ತಿಳಿಸಿವೆ.
ಕಾಶ್ಮೀರದಲ್ಲಿನ ಭಯೋತ್ಪಾದಕ ಅಹ್ಮದ್ ನ ಕುಪ್ವಾರಾದಲ್ಲಿರುವ ಮನೆಯನ್ನು ಇತ್ತೀಚೆಗೆ ಭದ್ರತಾ ಪಡೆಗಳು ಧ್ವಂಸಗೊಳಿಸಿದ್ದವು. ಪ್ರಸ್ತುತ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನೆಲೆಸಿದ್ದಾನೆಂದು ನಂಬಲಾದ ಅಹ್ಮದ್, ಕಳೆದ ಎರಡು ವರ್ಷಗಳಲ್ಲಿ ತನ್ನ ಸ್ಲೀಪರ್ ಸೆಲ್ ನೆಟ್ವರ್ಕ್ ಮೂಲಕ ಕಾಶ್ಮೀರದಲ್ಲಿ ಅನೇಕ ಭಯೋತ್ಪಾದಕ ದಾಳಿಗಳನ್ನು ಆಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ತಿಳಿದು ಬಂದಿದೆ.
25 ಪ್ರವಾಸಿಗರು ಮತ್ತು ಒಬ್ಬ ಕಾಶ್ಮೀರಿಯ ಸಾವಿಗೆ ಕಾರಣವಾದ ಪಹಲ್ಗಾಮ್ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಎನ್ ಐ ಎ ಗೆ ತಿಳಿದು ಬಂದಿದೆ.