ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪಾಕಿಸ್ತಾನ ಜಿಂದಾಬಾದ್ ಘೋಷಣೆ, ಕೆರಳಿ ಕೆಂಡವಾದ ಕೇಸರಿ ಕಲಿಗಳು: ದೇಶ ವಿರೋಧಿಗಳ ಹೆಡೆಮುರಿ ಕಟ್ಟುವಂತೆ ಬಿಜೆಪಿ ಪಟ್ಟು

On: February 27, 2024 9:58 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:27-02-2024

ಬೆಂಗಳೂರು: ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದಕ್ಕೆ ಜನಾಕ್ರೋಶ ವ್ಯಕ್ತವಾಗುತ್ತಿದೆ. ಕೇಸರಿ ಕಲಿಗಳಂತೂ ಕೆರಳಿ ಕೆಂಡವಾಗಿದ್ದಾರೆ. ಕಾಂಗ್ರೆಸ್ ನ ತುಷ್ಟೀಕರಣದ ಪರಮಾವಧಿಗೆ ಸಾಕ್ಷಿ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಪಾಕಿಸ್ಥಾನಿ ಸಹಾನುಭೂತಿಗೆ ರಾಜಾತಿಥ್ಯ ನೀಡಿದ್ದಾಯಿತು – ಈಗ ಪಾಕಿಸ್ಥಾನಿ ಬೆಂಬಲಿಗ ನಾಯಕನಿಗೆ ರಾಜ್ಯಸಭೆಯ ಸದಸ್ಯನ ಪಟ್ಟ. ಇದು ಕಾಂಗ್ರೆಸ್ ಕರ್ನಾಟಕವನ್ನು ಭಾರತ ವಿರೋಧಿ ಕೇಂದ್ರವನ್ನಾಗಿಸಿರುವ ಪರಿ. ಭಯೋತ್ಪಾದಕರಿಗೆ ಬ್ರದರ್ಸ್, ಅಮಾಯಕರು ಎಂಬ ಪಟ್ಟ ಕಟ್ಟಿದ ಕಾಂಗ್ರೆಸ್‌ನ ತುಷ್ಟೀಕರಣದ ರಾಜಕೀಯದ ಫಲಿತಾಂಶ ಪದೇ ಪದೇ ಕರ್ನಾಟಕದಲ್ಲಿ ಕಾಣ ಸಿಗುತ್ತಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಓಲೈಕೆ ರಾಜಕಾರಣದ ಪಿತಾಮಹ ಸಿಎಂ ಸಿದ್ದರಾಮಯ್ಯ ಅವರು ಹಾಗೂ ಕಾಂಗ್ರೆಸ್‌ನ ಇತರ ನಾಯಕರು ಪಾಕಿಸ್ಥಾನಿ ಸಹಾನುಭೂತಿಗಳಿಗೆ ಕೆಲವೇ ಸಮಯದಲ್ಲಿ ಕ್ಲೀನ್ ಚಿಟ್ ನೀಡಲು ಸದಾ “ಸಿದ್ದ”ವಾಗಿರುತ್ತಾರೆ.
ಈ ಪ್ರಕರಣದ ಸಮಗ್ರ ತನಿಖೆಯಾಗಬೇಕು ಎಂದು ನಾವು ಒತ್ತಾಯಿಸುತ್ತೇವೆ‌. ಕಾಂಗ್ರೆಸ್‌ನ ದೇಶ ವಿರೋಧಿ ಕಾರ್ಯಾಚರಣೆಗೆ ಕರ್ನಾಟಕ ಪ್ರಯೋಗ ಶಾಲೆಯಾಗಲು ನಾವೆಂದಿಗೂ ಬಿಡುವುದಿಲ್ಲ ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.

ಇಂದು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ದೇಶ ವಿರೋಧಿ ಕೃತ್ಯ. ಇದನ್ನು ಪ್ರಶ್ನಿಸಿದ ಮಾಧ್ಯಮದವರನ್ನು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ನಾಸೀರ್ ಹುಸೇನ್ ಏ ನಡೀಯೋ ಯಾವನೌನು ಎಂದು ಅಸಭ್ಯವಾಗಿ ವರ್ತಿಸುವುದು ಸಂಸದೀಯ ವರ್ತನೆಯಲ್ಲ. ಅವರದು ಅನಾಗರಿಕ ಪ್ರವೃತ್ತಿ. ಇಂತಹ ಖದೀಮರು ಕರ್ನಾಟಕದಿಂದ ಆಯ್ಕೆಯಾಗಿರುವುದು ಇಡೀ ಕನ್ನಡ ನಾಡಿನ ಜನತೆ ತಲೆ ತಗ್ಗಿಸುವಂತೆ ಮಾಡಿದೆ. ತಕ್ಷಣ ಕಾಂಗ್ರೆಸ್ ಪಕ್ಷ ಇಂತಹ ದೇಶದ್ರೋಹಿ ಚಟುವಟಿಕೆಗಳ ಬಗ್ಗೆ ತನ್ನ ನಿಲುವೇನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಮುಖಂಡ ಕೊಳೇನಹಳ್ಳಿ ಬಿ ಎಂ ಸತೀಶ್ ಆಗ್ರಹಿಸಿದ್ದಾರೆ.

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕೆ ಹೆಚ್ ಮುನಿಯಪ್ಪನವರು ಇಂತಹ ಕೃತ್ಯ ನಡೆದಿರುವುದು ಅಸಹನೀಯ. ಇದು ಸಹಿಸಲು ಸಾಧ್ಯವಿಲ್ಲ ಇಂತಹ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಅಗತ್ಯ ಎಂದು ಹೇಳಿದ್ದಾರೆ. ಕೆ ಹೆಚ್ ಮುನಿಯಪ್ಪನವರು ಸೂಕ್ತವಾದ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಆದ್ದರಿಂದ ನಾಸೀರ್ ಹುಸೇನ್ ರವರನ್ನು ರಾಜ್ಯಸಭಾ ಸದಸ್ಯ ಸ್ಥಾನದಿಂದ ವಜಾಗೊಳಿಸಬೇಕು ಎಂದು ಬಿ ಎಂ ಸತೀಶ್ ಒತ್ತಾಯಿಸಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment