ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜವಾಹರ್ ನವೋದಯ ವಿದ್ಯಾರ್ಥಿಗಳಿಗೂ “ಸಕ್ಷಮ” ವಿಸ್ತರಿಸಲು ಡಾ. ಪ್ರಭಾ ಮಲ್ಲಿಕಾರ್ಜುನ್ ರಿಗೆ ಪೋಷಕರ‌ ಮನವಿ

On: February 19, 2025 6:23 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:19-02-2025

ದಾವಣಗೆರೆ. ಜಿಲ್ಲೆಯ ದ್ವಿತೀಯ ‌ಪಿಯುಸಿ ವಿಜ್ಞಾನ ವಿಷಯದ ವಿದ್ಯಾರ್ಥಿಗಳಿಗಾಗಿ ಸಕ್ಷಮ ಯೋಜನೆಯಡಿ ನೀಡಲಾಗುತ್ತಿರುವ  ನೀಟ್ ಹಾಗೂ ಜೆಇಇ‌ ತರಬೇತಿಯನ್ನು ಜವಹರ್ ನವೋದಯ ಶಾಲೆಯ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕೆಂದು ಪೋಷಕರು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಮಾಡಿದ್ದಾರೆ.

ನಗರದ  ಜಿಲ್ಲಾಡಳಿತ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಭೇಟಿ ಮಾಡಿದ ನವೋದಯ ಶಾಲೆಯ ವಿದ್ಯಾರ್ಥಿಗಳ ಪೋಷಕರು ತಮ್ಮ ಮನವಿಯನ್ನು ಸಲ್ಲಿಸಿದ್ದಾರೆ. ದಾವಣಗೆರೆಯ ಜಿಲ್ಲೆಯ ದ್ವಿತೀಯ ‌ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಕ್ಷಮ‌ ಕಾರ್ಯಕ್ರಮದಡಿ‌ ವಿಶೇಷ ತರಬೇತಿ ‌ನೀಡುತ್ತಿರುವುದರಿಂದ ಸಾಕಷ್ಟು ಅನುಕೂಲವಾಗುತ್ತಿದೆ ಇದನ್ನು ಜಿಲ್ಲೆಯ‌ ಜವಹರ್ ನವೋದಯ ವಿದ್ಯಾಲಯದ ವಿದ್ಯಾರ್ಥಿಗಳಿಗೂ‌ ವಿಸ್ತರಿಸಿದರೆ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ ಎಂದು‌ ಮನವರಿಕೆ ಮಾಡಿದ್ದಾರೆ.

ಈ ವಿಚಾರ ಕುರಿತು‌ ಮಾತನಾಡಿದ ಸಂಸದರು‌ ಇತ್ತೀಚೆಗೆ ನವದೆಹಲಿಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿ ಶೈಕ್ಷಣಿಕ ವಿಚಾರಕ್ಕೆ‌ ಸಂಬಂಧಿಸಿದಂತೆ ಮಾತನಾಡಿದ್ದೇನೆ.‌ ಶೀಘ್ರದಲ್ಲೇ ಈ‌ ಬಗ್ಗೆ ಕ್ರಮ‌ಕೈಗೊಳ್ಳುತ್ತೇನೆ ಎಂದರು.

ಇದೇ ವೇಳೆ‌ ಸಂಸದರು ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರ ಅಹವಾಲುಗಳು ಹಾಗೂ ಕುಂದುಕೊರತೆಗಳನ್ನು ಆಲಿಸಿದರು. ಜನರ ಬೇಡಿಕೆಗಳಿಗೆ ಸ್ಪಂದಿಸುವಂತೆ ಅಧಿಕಾರಿ ವರ್ಗದವರಿಗೆ ಸೂಚನೆ ನೀಡಿದರು.

ಗ್ರಾಮೀಣಭಾಗದಿಂದ ಬಂದಿದ್ದ ಜನರ ಅಹವಾಲುಗಳನ್ನು ಸ್ವೀಕರಿಸಿ ಸಾಧ್ಯವಾದಷ್ಟು ಶೀಘ್ರದಲ್ಲೇ ಎಲ್ಲರ ಬೇಡಿಕೆಗಳ ಈಡೇರಿಸುವುದಾಗಿ ಭರವಸೆ ನೀಡಿದರು. ವಿಶೇಷವಾಗಿ ವಿಶೇಷಚೇತನರು ಉದ್ಯೋಗ ಕಲ್ಪಿಸುವಂತೆ ತಮ್ಮ ಸಂಜ್ಞೆಯ ಭಾಷೆಯ ಮೂಲಕ ಮಾಡಿದ ಮನವಿಗೆ ಸ್ಪಂದಿಸಿದ ಸಂಸದರು‌ ಕ್ರಮ ವಹಿಸುವುದಾಗಿ ತಿಳಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment