Site icon Kannada News-suddikshana

ಪ್ಯಾರಾಲಿಂಪಿಕ್ಸ್:​ ಇತಿಹಾಸದಲ್ಲಿ ಮೊದಲ ಬಾರಿಗೆ 29 ಪದಕಗಳೊಂದಿಗೆ ದಾಖಲೆ ಬರೆದ ಭಾರತ

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಅದ್ಭುತ ಸಾಧನೆಯೊಂದಿಗೆ ಪಯಣ ಮುಗಿಸಿದೆ. ಕ್ರೀಡಾಕೂಟದ ಕೊನೆಯ ದಿನವಾದ ಇಂದು ಭಾರತ ದಾಖಲೆಯ 29 ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇವುಗಳಲ್ಲಿ ಏಳು ಚಿನ್ನ, ಒಂಬತ್ತು ಬೆಳ್ಳಿ ಮತ್ತು 13 ಕಂಚು ಸೇರಿವೆ.

ಪ್ಯಾರಾಲಿಂಪಿಕ್ಸ್​ ಇತಿಹಾಸದಲ್ಲಿ ಭಾರತ ಇಷ್ಟು ಸಂಖ್ಯೆಯ ಪದಕಗಳನ್ನು ಗೆದ್ದಿದ್ದು, ಇದೇ ಮೊದಲು. ಇದಕ್ಕೂ ಮೊದಲು ಟೊಕಿಯೋ ಪ್ಯಾರಾಲಿಂಪಿಕ್​ನಲ್ಲಿ 19 ಪದಕಗಳನ್ನು ಗೆದ್ದಿದ್ದು, ಭಾರತದ ಅತ್ಯುತ್ತಮ ಪ್ರದರ್ಶನವಾಗಿತ್ತು. ಇದರೊಂದಿಗೆ ಭಾರತ ಪದಕ ಪಟ್ಟಿಯಲ್ಲಿ 18ನೇ ಸ್ಥಾನದಲ್ಲಿದೆ.

Exit mobile version