SUDDIKSHANA KANNADA NEWS/ DAVANAGERE/ DATE:11-06-2024
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಒಳಸಂಚು ರೂಪಿಸಿದ ಆರೋಪದ ಮೇರೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಎರಡನೇ ಪತ್ನಿ ಪವಿತ್ರಾ ಗೌಡ ಅವರನ್ನು ಬಂಧಿಸಲಾಗಿದೆ.
ಈ ಪ್ರಕರಣದಲ್ಲಿ ದರ್ಶನ ತೂಗುದೀಪ ಸೇರಿದಂತೆ ಒಟ್ಟು ಹತ್ತು ಮಂದಿಯನ್ನು ಬಂಧಿಸಲಾಗಿದೆ. ಆದ್ರೆ, ಬೆಂಗಳೂರು ಪೊಲೀಸ್ ಕಮೀಷನರ್ ಅವರು ಈಗಾಗಲೇ ಐವರನ್ನು ಬಂಧಿಸಲಾಗಿದ್ದು, ಹಲವರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ನಟಿ ಪವಿತ್ರಾ ಗೌಡ ನಡುವಿನ ಕೋಲ್ಡ್ ವಾರ್ ಎಲ್ಲರಿಗೂ ಗೊತ್ತಿರುವ ವಿಚಾರ. ಕೆಲ ತಿಂಗಳುಗಳ ಹಿಂದೆಯಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಬಹಿರಂಗವಾಗಿಯೇ ಇಬ್ಬರ
ನಡುವೆ ಜಟಾಪಟಿ ನಡೆದಿತ್ತು. ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡ ಪವಿತ್ರಾ ಗೌಡಗೆ ವಿಜಯಲಕ್ಷ್ಮಿ ನೇರವಾಗಿ ಎಚ್ಚರಿಕೆ ನೀಡಿ ಅವರ ವೈಯಕ್ತಿಕ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದರು. ವಿಜಯಲಕ್ಷ್ಮಿ ಎಚ್ಚರಿಕೆಗೂ ಪವಿತ್ರಾ ಗೌಡ ತಿರುಗೇಟು ನೀಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಇಬ್ಬರ ನಡುವೆ ಜಟಾಪಟಿ ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ಬಳಿಕ ಇಬ್ಬರು ಕೂಡ ತಣ್ಣಗಾಗಿದ್ದರು. ಆದರೆ ಇಬ್ಬರ ನಡುವಿನ ಕೋಲ್ಡ್ ವಾರ್ ಮುಂದುವರಿದಿದ್ದು, ಇದೀಗ ಮತ್ತೆ ವಿಜಯಲಕ್ಷ್ಮಿ ಫೋಸ್ಟ್‌ಗೆ ಪವಿತ್ರಾ ಗೌಡ ತಿರುಗೇಟು ನೀಡಿದ್ದರು. ಇದು ಹಳೆಯ ವಿಚಾರ. ಆದ್ರೆ, ಪವಿತ್ರಾ ಗೌಡರ ಅಶ್ಲೀಲ ಮೆಸೇಜ್ ಕಳುಹಿಸಿದ ಎಂಬ ಕಾರಣಕ್ಕೆ ರೇಣುಕಾಸ್ವಾಮಿ ಹತ್ಯೆ ಮಾಡಿರುವ ಕೇಸ್ ಸಂಬಂಧ ದರ್ಶನ್ ಹಾಗೂ ಪವಿತ್ರಾ ಗೌಡ ಇಬ್ಬರೂ ಬಂಧನಕ್ಕೆ ಒಳಪಟ್ಟಿದ್ದಾರೆ.
ಆರ್. ಆರ್. ನಗರ ಪೊಲೀಸ್ ಠಾಣೆಯ ಪೊಲೀಸರು ಬೆಂಗಳೂರಿನಲ್ಲಿ ನಟ ದರ್ಶನ್ ಗೆಳತಿ ಪವಿತ್ರಾಗೌಡರನ್ನು ವಶಕ್ಕೆ ಪಡೆದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ನಟ ದರ್ಶನ್ ತೂಗುದೀಪ ಅವರನ್ನು
ಅರೆಸ್ಟ್ ಮಾಡಿ, ವಿಚಾರಣೆ ನಡೆಸುತ್ತಿದ್ದಾರೆ.
ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ದರ್ಶನ್ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಬೆಳವಣಿಗೆ ನಡೆದಿದೆ. ಬೆಂಗಳೂರಿನಲ್ಲಿ ನಟ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್.ಆರ್.ನಗರ ಠಾಣೆಯ ಪೊಲೀಸರು ಪವಿತ್ರಾಗೌಡಳನ್ನು ವಶಕ್ಕೆ ಪಡೆದಿದ್ದಾರೆ.
ಪವಿತ್ರಾಗೌಡಳನ್ನು ವಶಕ್ಕೆ ಪಡೆದ ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಕಾಮಾಕ್ಷಿ ಪಾಳ್ಯ ಪೊಲೀಸ್ ಸ್ಟೇಷನ್ ಗೆ ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ ಜೊತೆ ಅವರ ಅಕ್ಕ ಕೂಡ ಠಾಣೆಗೆ
ಆಗಮಿಸಿದ್ದಾರೆ. ಇದು ತೀವ್ರ ಕುತೂಹಲ ಕೆರಳಿಸಿದೆ.
ಈ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 10 ಜನರನ್ನು ವಿಜಯನಗರ ಎಸಿಪಿ ಚಂದನ್ ತಂಡ ಬಂಧಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಮೈಸೂರಿನ ಆಡಿಸನ್ ಹೋಟೆಲ್ನಲ್ಲಿ ದರ್ಶನ್ ಅರೆಸ್ಟ್
ಮಾಡಲಾಗಿದ್ದು ನಟ ದರ್ಶನ್ ಸೇರಿದಂತೆ ಪಟ್ಟಣಗೆರೆ ಜಯಣ್ಣ ಪುತ್ರ ವಿನಯ್, ಕಿರಣ್, ಮಧು, ಲಕ್ಷ್ಮಣ್, ಆನಂದ್, ರಾಘವೇಂದ್ರ ಸೇರಿ 10 ಜನರನ್ನು ಅರೆಸ್ಟ್ ಮಾಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೈಸೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಡಿಸಿಪಿ ಗಿರೀಶ್, ಎಸಿಪಿ ಚಂದನ್ರಿಂದ ನಟ ದರ್ಶನ್ ವಿಚಾರಣೆ ನಡೆಯುತ್ತಿದೆ. ಅನ್ನಪೂರ್ಣೇಶ್ವರಿನಗರ ಠಾಣೆ ಬಳಿ ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ.