SUDDIKSHANA KANNADA NEWS/ DAVANAGERE/ DATE:13-12-2024
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಎಲ್ಲಾ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಆದ್ರೆ, ಪ್ರಕರಣದ ಎ-1 ಆರೋಪಿ ಪವಿತ್ರಾ ಗೌಡ ಇಂದು ಬಿಡುಗಡೆ ಆಗುವುದಿಲ್ಲ. ಬದಲಿಗೆ ಸೋಮವಾರ ಬಿಡುಗಡೆ ಆಗಲಿದ್ದಾರೆ.
ಪವಿತ್ರಾ ಗೌಡರಿಗೆ ಅಶ್ಲೀಲ ಮೆಸೇಜ್ ಮಾಡಿದ ಹಿನ್ನೆಲೆಯಲ್ಲಿ ದರ್ಶನ್ ತೂಗುದೀಪ ಹಾಗೂ ಗ್ಯಾಂಗ್ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ ಬೆಂಗಳೂರಿಗೆ ಕರೆತಂದು ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು
ಎಂಬ ಆರೋಪದ ಹಿನ್ನೆಲೆಯಲ್ಲಿ ಕನ್ನಡದ ಖ್ಯಾತ ನಟ, ಚಾಲೆಂಜಿಂಗ್ ಸ್ಟಾರ್, ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ತೂಗುದೀಪ, ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇರೆಗೆ ಪವಿತ್ರಾ ಗೌಡಳನ್ನು ಅರೆಸ್ಟ್ ಮಾಡಲಾಗಿತ್ತು.
ಈ ಪ್ರಕರಣ ಕೇವಲ ಕರ್ನಾಟಕ ಮಾತ್ರವಲ್ಲ, ಇಡೀ ದೇಶಾದ್ಯಂತ ಸುದ್ದಿಯಾಗಿತ್ತು. ಹೈಕೋರ್ಟ್ ಈಗ ಏಳು ಆರೋಪಿಗಳಿಗೂ ಜಾಮೀನು ನೀಡಿದೆ. ಕಾನೂನು ಪ್ರಕ್ರಿಯೆ ತಡವಾಗುವುದರಿಂದ ಇಂದು ಬಿಡುಗಡೆ ಭಾಗ್ಯ ಪವಿತ್ರಾ
ಗೌಡಗಿಲ್ಲ. ಸೋಮವಾರದಂದು ಬಿಡುಗಡೆ ಆಗಲಿದ್ದಾರೆ ಎಂದು ಪವಿತ್ರಾ ಗೌಡ ಪರ ವಕೀಲರು ತಿಳಿಸಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ಪ್ರಕರಣದ ಎ-1 ಆರೋಪಿ ಪವಿತ್ರಾ ಗೌಡ ಜಾಮೀನು ಸಿಗುತ್ತಿದ್ದಂತೆ ಕಣ್ಣೀರು ಸುರಿಸಿದ್ದಾಳೆ. ಏಳು ತಿಂಗಳ ಬಳಿಕ ಪವಿತ್ರಾ ಗೌಡಳಿಗೆ ಜಾಮೀನು ಸಿಕ್ಕಿದೆ. ರೆಗ್ಯುಲರ್ ಬೇಲ್ ಸಿಗುತ್ತಿದ್ದಂತೆ ಸಂತೋಷದಿಂದ ಕುಳಿತ ಪವಿತ್ರಾ ಗೌಡ ಕಣ್ಣೀರು ಹಾಕಿದಳು ಎಂದು ಜೈಲಿನ ಮೂಲಗಳು ತಿಳಿಸಿವೆ.