ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಭದ್ರಾ ಮೇಲ್ದಂಡೆ, ಮೇಕೆದಾಟು ಯೋಜನೆ ಜಾರಿಗೆ ಗಮನ ಹರಿಸಿ: ಕೇಂದ್ರ ಸಚಿವ ಸಿ.ಆರ್.ಪಾಟೀಲ್‌ರಿಗೆ ಸಿದ್ದರಾಮಯ್ಯ ಮನವಿ

On: April 3, 2025 5:42 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:03-04-2025

ಬೆಂಗಳೂರು: ಕೇಂದ್ರ ಜಲಶಕ್ತಿ ಸಚಿವ ಸಿ. ಆರ್. ಪಾಟೀಲ್ ರಿಗೆ ಸಿಎಂ ಸಿದ್ದರಾಮಯ್ಯ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಬೇಡಿಕೆ ಸಲ್ಲಿಸಿದ್ದಾರೆ.

ದೇಶದಲ್ಲೇ ರಾಜಸ್ಥಾನವನ್ನು ಹೊರತುಪಡಿಸಿದರೆ ಕರ್ನಾಟಕ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯವಾಗಿದೆ. ಕರ್ನಾಟಕದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹಾಗೂ ಅನುಷ್ಠಾನಗೊಳಿಸಲಾಗಿರುವ ನೀರಾವರಿ ಯೋಜನೆಗಳು ರಾಜ್ಯದ ಕೃಷಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಿಗೆ ಕಾರಣವಾಗಿವೆ. ಉತ್ಪಾದನೆಯಲ್ಲಿನ ಹೆಚ್ಚಳ, ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ನೀರಿನ ನಿರ್ವಹಣೆಯಲ್ಲಿ ಸುಧಾರಣೆ, ಹವಾಮಾನ ವೈಪರೀತ್ಯದ ನಿರ್ವಹಣೆ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಕೃಷಿ ಉತ್ಪಾದನೆ ಹೆಚ್ಚಳ, ರೈತರ ಆದಾಯ ಹೆಚ್ಚಳ ಮಾಡಲು ಪೂರಕವಾಗಿ ನಿರಂತರ ಮತ್ತು ಸಮರ್ಪಕ ನೀರಾವರಿ ಪೂರೈಕೆಗೆ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದ ನೀರಾವರಿ ಯೋಜನೆ/ವಿಷಯಗಳಿಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ನಾನು ತಮ್ಮ ಗಮನ ಸೆಳೆಯಬಯಸುತ್ತೇನೆ. ಕೇಂದ್ರ ಸರ್ಕಾರದ ಅನುಮತಿಗಾಗಿ ಬಾಕಿಯಿರುವ ಕರ್ನಾಟಕದ ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ತಾವು ವೈಯಕ್ತಿಕವಾಗಿ ಗಮನ ಹರಿಸಲು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯದ ಬಾಕಿಯಿರುವ ಎಲ್ಲಾ ನೀರಾವರಿ ಯೋಜನೆಗಳಿಗೆ/ಪ್ರಸ್ತಾವನೆಗಳಿಗೆ ಅನುಮತಿ/ಕ್ಲಿಯರೆನ್ಸ್‌ ನೀಡಲು ಜಲಶಕ್ತಿ ಸಚಿವಾಲಯಕ್ಕೆ ತಾವು ನಿರ್ದೇಶನ ನೀಡಬೇಕು. ಈ ಯೋಜನೆಗಳು ರಾಜ್ಯದ ನೀರಾವರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆ ಮೂಲಕ ರೈತರ ಕಲ್ಯಾಣಕ್ಕೆ ನೆರವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ದತ್ತಾತ್ರೇಯ ಹೊಸಬಾಳೆ

ಜನಸಂಖ್ಯಾ ಅಸಮತೋಲನ ಸಮಸ್ಯೆ ಪರಿಹಾರಕ್ಕೆ ಜನಸಂಖ್ಯಾ ನೀತಿ ಅಗತ್ಯ: ದತ್ತಾತ್ರೇಯ ಹೊಸಬಾಳೆ!

ಮಲ್ಲಿಕಾರ್ಜುನ ಖರ್ಗೆ

ಸಮಾಜ ಒಪ್ಪಿಕೊಂಡಿರುವ ಆರ್ ಎಸ್ ಎಸ್ ರಾಜಕೀಯ ಉದ್ದೇಶಕ್ಕೆ ನಿಷೇಧ ಸಾಧ್ಯವೇ ಇಲ್ಲ: ಮಲ್ಲಿಕಾರ್ಜುನ್ ಖರ್ಗೆಗೆ ದತ್ತಾತ್ರೇಯ ಹೊಸಬಾಳೆ ತಿರುಗೇಟು!

ಎಸ್. ಎಸ್. ಮಲ್ಲಿಕಾರ್ಜುನ್

“ಎಲ್ಲೆಲ್ಲಿ ಆಸ್ತಿ ಮಾಡಿದ್ದೇನೆಂದು ನನಗೆೇ ಗೊತ್ತಿಲ್ಲ, ಕಾರ್ ಕೊಡ್ತೇನೆ ಹೋಗಿ ನೋಡ್ಕಂಡು ಬರಲಿ”: ಬಿ. ಪಿ. ಹರೀಶ್ ಗೆ ಎಸ್. ಎಸ್. ಮಲ್ಲಿಕಾರ್ಜುನ್ ಸವಾಲ್!

ಎಸ್. ಎಸ್. ಮಲ್ಲಿಕಾರ್ಜುನ್

ಸಿದ್ದರಾಮಯ್ಯರ CM ಖುರ್ಚಿ ಗಟ್ಟಿ ಇದೆ, ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ: ಎಸ್. ಎಸ್. ಮಲ್ಲಿಕಾರ್ಜುನ್

ಎಸ್. ಎಸ್. ಮಲ್ಲಿಕಾರ್ಜುನ್

ಕೈ ಹಚ್ಚಿದರೆ ಮೇಲೇಳಲು ಆಗಬಾರದು ಹಾಗೆ ಕೈ ಹಚ್ಚುತ್ತೀನಿ: ಬಿ. ಪಿ. ಹರೀಶ್ ವಿರುದ್ಧ ಎಸ್. ಎಸ್. ಮಲ್ಲಿಕಾರ್ಜುನ್ ಕೆಂಡಾಮಂಡಲ!

ಕನ್ನಡ

ಜನವರಿಗೆ ಅಗ್ಗದ ದರದಲ್ಲಿ ಕನ್ನಡದ ಓಟಿಟಿ ಪ್ಲಾಟ್ ಫಾರ್ಮ್: ಕಂಠೀರವ ಸ್ಟುಡಿಯೋ ಅಧ್ಯಕ್ಷ ಮೆಹಬೂಬ್ ಪಾಷ

Leave a Comment