SUDDIKSHANA KANNADA NEWS/ DAVANAGERE/DATE:19_08_2025
ದಾವಣಗೆರೆ: ಜಗಳೂರು ತಾಲೂಕಿನ ಪಲ್ಲಾಗಟ್ಟೆ ಗ್ರಾಮ ಪಂಚಾಯಿತಿ ಪಿಡಿಒ ಹತ್ತು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
READ ALSO THIS STORY: ಧರ್ಮಸ್ಥಳ ಕೇಸ್ ಗೆ ಟ್ವಿಸ್ಟ್, ಮೂವರ ಗುಂಪು ನನಗೆ ಬುರುಡೆ ಕೊಟ್ಟು ಪೊಲೀಸರಿಗೆ ಶರಣಾಗುವಂತೆ ಹೇಳಿತ್ತು: ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿ!
ಶಶಿಧರ್ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ. ಮನೆಯ ಇ-ಸ್ವತ್ತು ಮಾಡಿಕೊಡಲು ಹತ್ತು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂರಗೊಂಡನಹಳ್ಳಿ ಗ್ರಾಮದ ಎಸ್. ಸಿ. ಅಶೋಕ್ ಎಂಬುವವರಿಗೆ ಸೇರಿದ ಮೂರು ಮನೆಗಳಿದ್ದು, ಇ- ಸ್ವತ್ತು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಶಶಿಧರ್ ಅವರು ಇ-ಸ್ವತ್ತು ಮಾಡಿಕೊಡಲು ಹತ್ತು ಸಾವಿರ ರೂಪಾಯಿ ಲಂಚ ಕೇಳಿದ್ದರು. ಈ ಬಗ್ಗೆ ಅಶೋಕ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಶಶಿಧರ್ ಅವರನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ.