SUDDIKSHANA KANNADA NEWS/ DAVANAGERE/ DATE:26-08-2024
ದಾವಣಗೆರೆ: ರಾಜ್ಯದಲ್ಲಿ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯು ಪರಿಸರಕ್ಕೆ ಹಾನಿ ಮತ್ತು ಮಾನವ ಮತ್ತಿತರ ಪ್ರಾಣಿಗಳ ಆರೋಗ್ಯಕ್ಕೆ ಅಪಾಯಕಾರಿಯಾಗಿರುವಂತಹ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ-ಲೋಟ, ಪ್ಲಾಸ್ಟಿಕ್ ಚಮಚಗಳು, ಕ್ಲಿಂಗ್ ಫಿಲ್ಡ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆಗಳು ಮತ್ತು ಥರ್ಮಕೋಲ್ ನಂತಹ ಏಕಬಳಕೆ ಪ್ಲಾಸ್ಟಿಕ್ನ ವಸ್ತುಗಳ ದಾಸ್ತಾನು, ವಿತರಣೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ಗಳ ಬಳಕೆಯನ್ನು ನಿಷೇಧಿಸಲಾಗಿದೆ.
ಕರ್ನಾಟಕ ನಗರಪಾಲಿಕೆಗಳ (ಬಿ.ಬಿ.ಎಂ.ಪಿ ಹೊರತುಪಡಿಸಿ) ನಿಷೇಧಿತ ಪ್ಲಾಸ್ಟಿಕ್ ಸಾಮಾಗ್ರಿಗಳ ಅಕ್ರಮ ಮಾರಾಟ, ದಾಸ್ತಾನು ಸಂಗ್ರಹಣೆ ಹಾಗೂ ಬಳಕೆ ಕಂಡುಬಂದಲ್ಲಿ ಕಾನೂನಾತ್ಮಕ ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.