(PM-KISAN:-) PM-KISAN:-ಕೇಂದ್ರ ಸರ್ಕಾರದ ಯೋಜನೆ ಆಗಿರುವಂತಹ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ ದೇಶದ ರೈತರಿಗೆ ವರ್ಷಕ್ಕೆ 6 ಸಾವಿರ ರೂಪಾಯಿ ಹಣವನ್ನು ನೀಡುತ್ತಿದ್ದು, ಇಲ್ಲಿಯವರೆಗೆ 17 ಕಂತಿನಲ್ಲಿ ಒಟ್ಟು 34 ಸಾವಿರ ರೂಪಾಯಿಯನ್ನು ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಯಾವಾಗ ಬಿಡುಗಡೆ ಆಗಲಿದೆ? ಹಣ ಜಮಾವಾಗಬೇಕೆಂದರೆ ಏನು ಮಾಡಬೇಕು? ಎಂಬ ವಿವರ ಇಲ್ಲಿ ತಿಳಿಯಿರಿ..
18ನೇ ಕಂತಿನ ಹಣ ಯಾವಾಗ ರೈತರ ಕೈ ಸೇರಲಿದೆ?
ಪಿಎಂ ಕಿಸಾನ್ ಯೋಜನೆಯ ಪ್ರತಿ ವರ್ಷ 6 ಸಾವಿರ ರೂ. ಹಣವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಮೊದಲನೇ ಕಂತಿನ ಹಣವನ್ನು ಏಪ್ರಿಲ್ ನಿಂದ ಜುಲೈ ತಿಂಗಳ ಅವಧಿಯಲ್ಲಿ, ಎರಡನೇ ಕಂತಿನ ಹಣವನ್ನು ಆಗಸ್ಟ್ ನಿಂದ ನವೆಂಬರ್ ತಿಂಗಳ ಅವಧಿಯಲ್ಲಿ ಹಾಗೂ ಮೂರನೇ ಕಂತಿನ ಹಣವನ್ನು ಡಿಸೆಂಬರ್ ನಿಂದ ಮಾರ್ಚ್ ತಿಂಗಳ ಅವಧಿಯಲ್ಲಿ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಅದೇ ರೀತಿ 18ನೇ ಕಂತಿನ ಹಣವನ್ನು ಆಗಸ್ಟ್ ತಿಂಗಳಿನಿಂದ ನವೆಂಬರ್ ತಿಂಗಳ ಅವಧಿಯಲ್ಲಿ ರೈತರ ಖಾತೆಗೆ ವರ್ಗಾಯಿಸುವ ಸಾಧ್ಯತೆಗಳಿವೆ.
ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣವನ್ನು ಜೂನ್ ತಿಂಗಳಿನಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರಿಂದ ದೇಶದ 9.26 ಕೋಟಿ ರೈತರಿಗೆ 21 ಸಾವಿರ ಕೋಟಿ ರೂ. ಹಣವನ್ನು ವರ್ಗಾಯಿಸಲಾಗಿತ್ತು. ನಂತರದ 18ನೇ ಕಂತಿನ ಹಣವನ್ನು ರೈತರು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇ- ಕೆವೈಸಿ ಯನ್ನು ನೀವು ಈ ಕೆಳಗಿನ ಮೂರು ವಿಧಾನಗಳಲ್ಲಿ ಯಾವುದಾದರೂ ಒಂದು ವಿಧಾನ ಬಳಸಿಕೊಂಡು ಮಾಡಿಸಬಹುದು.
1. ಒಟಿಪಿ ಆಧಾರಿತ ಇ- ಕೆವೈಸಿ
2. ಬಯೋ ಮೆಟ್ರಿಕ್ ಆಧಾರಿತ ಇ- ಕೆವೈಸಿ
3. ಮುಖಚರ್ಯೆ ಆಧಾರಿತ ಇ- ಕೆವೈಸಿ
ನಿಮ್ಮ ಪಿಎಂ ಕಿಸಾನ್ ಯೋಜನೆಯ ಖಾತೆಗೆ ವಿವಿಧ 3 ವಿಧಾನಗಳ ಆಧಾರಿತ ಇ- ಕೆವೈಸಿ ಮಾಡಿಸಲು ನಿಮ್ಮ ಹತ್ತಿರದ ನಾಗರಿಕ ಸೇವಾ ಕೇಂದ್ರಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ.