ವಾಷಿಂಗ್ಟನ್: ಅಮೆರಿಕದ ವಾಷಿಂಗ್ಟನ್‌ನಲ್ಲಿ ನಡೆದ ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಅಸೋಸಿಯೇಷನ್ ಡಿನ್ನರ್ ವೇಳೆ ನಡೆದ ಗುಂಡಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ.
ದಾಳಿಯ ವೇಳೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಮತ್ತು ಉಪಾಧ್ಯಕ್ಷರು ಸುರಕ್ಷಿತವಾಗಿರುವುದಕ್ಕೆ ಅವರು ನಿರಾಳತೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ‘X’ ನಲ್ಲಿ ಪೋಸ್ಟ್ ಮಾಡಿರುವ ಮೋದಿ, “ಅಧ್ಯಕ್ಷ ಟ್ರಂಪ್ ಮತ್ತು ಅವರ ಕುಟುಂಬದವರು ಸುರಕ್ಷಿತವಾಗಿದ್ದಾರೆ ಎಂಬ ಸುದ್ದಿ ತಿಳಿದು ಸಮಾಧಾನವಾಯಿತು. ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಯಾವುದೇ ಸ್ಥಾನವಿಲ್ಲ” ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಭದ್ರತಾ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ದಾಳಿಕೋರನನ್ನು ಬಂಧಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.






Leave a comment