ಹೊಸ ದೆಹಲಿ: ಭಾರತೀಯ ಸಂಸದೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಮಹಿಳಾ ಮೀಸಲಾತಿ ವಿಧೇಯಕವನ್ನು (Nari Shakti Vandan Adhiniyam) ಶೀಘ್ರವಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದ್ದಾರೆ.
ಈ ಕುರಿತು ಎಲ್ಲಾ ಪಕ್ಷಗಳ ಮುಖಂಡರಿಗೆ ಪತ್ರ ಬರೆದಿರುವ ಪ್ರಧಾನಿಯವರು, “ದಶಕಗಳ ಕಾಯುವಿಕೆಯನ್ನು ಕೊನೆಗಾಣಿಸುವ ಸಮಯ ಬಂದಿದೆ” ಎಂದು ತಿಳಿಸಿದ್ದಾರೆ. 2023ರಲ್ಲಿ ಅಂಗೀಕರಿಸಲ್ಪಟ್ಟ ಈ ಕಾಯಿದೆಯು ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆಯ ನಂತರವಷ್ಟೇ ಜಾರಿಯಾಗಬೇಕಿತ್ತು.
ಆದರೆ, ಜನಗಣತಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ, 2011ರ ಜನಗಣತಿಯ ಅಂಕಿಅಂಶಗಳನ್ನೇ ಆಧಾರವಾಗಿಟ್ಟುಕೊಂಡು ಮೀಸಲಾತಿ ಜಾರಿಗೆ ತರಲು ಸರ್ಕಾರ ತಿದ್ದುಪಡಿ ತರುತ್ತಿದೆ. ಇದರಿಂದಾಗಿ ಮುಂಬರುವ ಚುನಾವಣೆಗಳಲ್ಲೇ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ಲಭ್ಯವಾಗುವ ಸಾಧ್ಯತೆ ದಟ್ಟವಾಗಿದೆ.





Leave a comment