Home ಕ್ರೈಂ ನ್ಯೂಸ್ 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡು: ಸಿಎಂ ಸಿದ್ದರಾಮಯ್ಯ ಆಕ್ರೋಶ!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡು: ಸಿಎಂ ಸಿದ್ದರಾಮಯ್ಯ ಆಕ್ರೋಶ!

Share
Share

ಬೆಂಗಳೂರು: ಅಪರಾಧವನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ, ಅಪರಾಧ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ. ಆದರೆ ಕಳೆದ ಸಾಲಿನಲ್ಲಿ 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡಿನ ವಿಷಯ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕೊಲೆ, ಸುಲಿಗೆ, ಡಕಾಯಿತಿ, ದರೋಡೆ ಪ್ರಕಣಗಳ ಸಂಖ್ಯೆಯಲ್ಲಿ ಕಳೆದ ಒಂದು ವರ್ಷದಲ್ಲಿ ಕಡಿಮೆಯಾಗಿದೆ. ಆದರೆ ಸೈಬರ್ ಅಪರಾಧ, ಡ್ರಗ್ಸ್ ಚಟುವಟಿಕೆಗಳು ಹೆಚ್ಚಾಗಿದ್ದು, ಅದನ್ನು ಮಟ್ಟ ಹಾಕಲು ಕಠಿಣ ಕ್ರಮಗಳನ್ನು ಜರುಗಿಸಬೇಕು ಎಂದು ಹೇಳಿದರು.

ನಮ್ಮ ರಾಜ್ಯದಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ಕನ್ವಿಕ್ಷನ್ ದರ ಕಡಿಮೆಯಿದೆ. ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಶಿಕ್ಷೆಯನ್ನು ಖಾತ್ರಿಪಡಿಸುವಲ್ಲಿ ಪೊಲೀಸರ ಪಾತ್ರ ಮುಖ್ಯವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಕನ್ವಿಕ್ಷನ್ ಪ್ರಮಾಣ ಕಳೆದ ವರ್ಷ ಶೇ.3ರಷ್ಟಿತ್ತು ಈಗ ಶೇ.12 ಕ್ಕೆ ಸುಧಾರಿಸಿದ್ದು, ಇದನ್ನು ಇನ್ನಷ್ಟು ಉತ್ತಮಪಡಿಸಬೇಕಿದೆ ಎಂದು ಹೇಳಿದರು.

ಪೊಲೀಸರು ಜಾಗರೂಕರಾಗಿದ್ದರೆ ಅನೇಕ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯವಿದೆ. ಎಟಿಎಂ ದರೋಡೆ ಪ್ರಕರಣಗಳು, ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಗಳನ್ನು ಪೊಲೀಸರು ಮುಂಜಾಗರೂಕತೆ ಮೂಲಕ ತಪ್ಪಿಸಬಹುದಾಗಿತ್ತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸರಿಯಾದ ಮುಂಜಾಗರೂಕತೆ ಕೈಗೊಂಡಿದ್ದರೆ, ಅಮಾಯಕರು ಕಾಲ್ತುಳಿತಕ್ಕೆ ಬಲಿಯಾಗುವುದನ್ನು ತಪ್ಪಿಸಲು ಸಾಧ್ಯವಿತ್ತು ಎಂದು ಹೇಳಿದರು.

Share

Leave a comment

Leave a Reply

Your email address will not be published. Required fields are marked *