Home ಕ್ರೈಂ ನ್ಯೂಸ್ 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡು: ಸಿಎಂ ಸಿದ್ದರಾಮಯ್ಯ ಆಕ್ರೋಶ!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡು: ಸಿಎಂ ಸಿದ್ದರಾಮಯ್ಯ ಆಕ್ರೋಶ!

Share
Share

ಬೆಂಗಳೂರು: ಅಪರಾಧವನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ, ಅಪರಾಧ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ. ಆದರೆ ಕಳೆದ ಸಾಲಿನಲ್ಲಿ 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡಿನ ವಿಷಯ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕೊಲೆ, ಸುಲಿಗೆ, ಡಕಾಯಿತಿ, ದರೋಡೆ ಪ್ರಕಣಗಳ ಸಂಖ್ಯೆಯಲ್ಲಿ ಕಳೆದ ಒಂದು ವರ್ಷದಲ್ಲಿ ಕಡಿಮೆಯಾಗಿದೆ. ಆದರೆ ಸೈಬರ್ ಅಪರಾಧ, ಡ್ರಗ್ಸ್ ಚಟುವಟಿಕೆಗಳು ಹೆಚ್ಚಾಗಿದ್ದು, ಅದನ್ನು ಮಟ್ಟ ಹಾಕಲು ಕಠಿಣ ಕ್ರಮಗಳನ್ನು ಜರುಗಿಸಬೇಕು ಎಂದು ಹೇಳಿದರು.

ನಮ್ಮ ರಾಜ್ಯದಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ಕನ್ವಿಕ್ಷನ್ ದರ ಕಡಿಮೆಯಿದೆ. ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಶಿಕ್ಷೆಯನ್ನು ಖಾತ್ರಿಪಡಿಸುವಲ್ಲಿ ಪೊಲೀಸರ ಪಾತ್ರ ಮುಖ್ಯವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಕನ್ವಿಕ್ಷನ್ ಪ್ರಮಾಣ ಕಳೆದ ವರ್ಷ ಶೇ.3ರಷ್ಟಿತ್ತು ಈಗ ಶೇ.12 ಕ್ಕೆ ಸುಧಾರಿಸಿದ್ದು, ಇದನ್ನು ಇನ್ನಷ್ಟು ಉತ್ತಮಪಡಿಸಬೇಕಿದೆ ಎಂದು ಹೇಳಿದರು.

ಪೊಲೀಸರು ಜಾಗರೂಕರಾಗಿದ್ದರೆ ಅನೇಕ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯವಿದೆ. ಎಟಿಎಂ ದರೋಡೆ ಪ್ರಕರಣಗಳು, ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಗಳನ್ನು ಪೊಲೀಸರು ಮುಂಜಾಗರೂಕತೆ ಮೂಲಕ ತಪ್ಪಿಸಬಹುದಾಗಿತ್ತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸರಿಯಾದ ಮುಂಜಾಗರೂಕತೆ ಕೈಗೊಂಡಿದ್ದರೆ, ಅಮಾಯಕರು ಕಾಲ್ತುಳಿತಕ್ಕೆ ಬಲಿಯಾಗುವುದನ್ನು ತಪ್ಪಿಸಲು ಸಾಧ್ಯವಿತ್ತು ಎಂದು ಹೇಳಿದರು.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles
ಗಣೇಶ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಮಸೀದಿ ಮುಂದೆ ಗಣೇಶ ಮೆರವಣಿಗೆ ನಿರ್ಬಂಧಿಸಿದರೆ ಠಾಣೆಗೆ ನುಗ್ಗುತ್ತೇನೆ: ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೇ ರೌಡಿಗೆ ಜೈಲು ಗ್ಯಾರಂಟಿ ಎಂದ್ರು ಪ್ರಿಯಾಂಕ್ ಖರ್ಗೆ! ಬೆಂಗಳೂರು ಮೈಸೂರು:ಗಣೇಶೋತ್ಸವ ಮೆರವಣಿಗೆಯ ವೇಳೆ ಮಸೀದಿ ಮುಂಭಾಗ ಹಾದುಹೋಗುವ ಮಾರ್ಗ ಹಾಗೂ ಧ್ವನಿವರ್ಧಕಗಳ ಬಳಕೆಯ ಕುರಿತು ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯ ಹೇಳಿಕೆಗೆ ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಟಿ. ನರಸೀಪುರ ಪೊಲೀಸ್ ಇನ್ಸ್‌ಪೆಕ್ಟರ್ ಸಾರ್ವಜನಿಕ ಸಭೆಯಲ್ಲಿ ಬ್ರಿಟಿಷರ ಕಾಲದ ದರ್ಪ ಪ್ರದರ್ಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹೆಸರಿನಲ್ಲಿ ಯುವಕರು ಮತ್ತು ಸಾರ್ವಜನಿಕರನ್ನು ಬೆದರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಮಸೀದಿ ಮುಂದೆ ಯುವಕರು ನೃತ್ಯ ಮಾಡಿದರೆ ಅಥವಾ ಮೆರವಣಿಗೆ ಸಾಗಿದರೆ ತಪ್ಪೇನು?” ಎಂದು ಪ್ರಶ್ನಿಸಿದರು. ಮುಂದುವರಿದು ಮಾತನಾಡಿದ ಅವರು, “ಪುಂಡಾಟಿಕೆ ಮಾಡುವುದು ಮತ್ತು ಕಲ್ಲು ತೂರುವ ಕೆಲಸಗಳನ್ನು ಯಾರು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ, ಹಿಂದೂಗಳು ಎಂದಿಗೂ ಈ ರೀತಿಯ ಕೆಲಸಗಳನ್ನು ಮಾಡಿಲ್ಲ. ಮಸೀದಿಗಳಿಂದ ದಿನಕ್ಕೆ ಐದು ಬಾರಿ ಬರುವ ಧ್ವನಿವರ್ಧಕಗಳ ಕೂಗು ಹಿಂದೂಗಳ ಮನೆಗೆ ಕೇಳಿಸದಂತೆ ಮಾಡುವ ಧೈರ್ಯ ಪೊಲೀಸರಿಗಿದೆಯೇ? ಅದನ್ನು ಬಿಟ್ಟು ಹಬ್ಬ ಆಚರಿಸುವ ಹಿಂದೂ ಯುವಕರಿಗೆ ಧಮ್ಕಿ ಹಾಕುವುದು ಸರಿಯಲ್ಲ. ಟಿ. ನರಸೀಪುರ ಇನ್ಸ್‌ಪೆಕ್ಟರ್ ಇನ್ನೊಮ್ಮೆ ಈ ರೀತಿ ಬಾಲ ಅಲ್ಲಾಡಿಸಿದರೆ ಅಥವಾ ಬೆದರಿಕೆ ಹಾಕಿದರೆ ನಾನೇ ನೇರವಾಗಿ ಠಾಣೆಗೆ ನುಗ್ಗುತ್ತೇನೆ” ಎಂದು ಖಡಕ್ ಸವಾಲು ಹಾಕಿದರು. ಇತ್ತೀಚಿನ ಗಣೇಶ ವಿಸರ್ಜನೆ ಮೆರವಣಿಗೆಯ ಸಿದ್ಧತೆಗಳ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಈ ನಡುವೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೈಸೂರಿನಲ್ಲೊಬ್ಬ ರೌಡಿ ಇದ್ದಾನೆ. ಆತನಿಗೆ ಪರಪ್ಪನ ಆಗ್ರಹಾರಕ್ಕೆ ನುಗ್ಗಿಸುತ್ತೇವೆ. ಕಾನೂನು ಕೈಗೆತ್ತಿಕೊಂಡರೆ ಸುಮ್ಮನಿರಲ್ಲ ಎಂದಿದ್ದಾರೆ. ಇದು ಪ್ರತಾಪ್ ಸಿಂಹ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಸಮರಕ್ಕೆ ಕಾರಣವಾಗಿದೆ.