Site icon Kannada News-suddikshana

“ನಮ್ಮ ಪೊಲೀಸ್ ನಮ್ಮ ಹೆಮ್ಮೆ” ಪೊಲೀಸ್ ಮ್ಯಾರಥಾನ್ 2025: ಸಿಗುತ್ತೆ ನಗದು ಬಹುಮಾನ!

SUDDIKSHANA KANNADA NEWS/ DAVANAGERE/ DATE:06-03-2025

ದಾವಣಗೆರೆ: ಮಾರ್ಚ್ 9ಕ್ಕೆ ದಾವಣಗೆರೆ ನಗರದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಎರಡನೇ ಬಾರಿಗೆ ಹಮ್ಮಿಕೊಂಡಿರುವ “ಪೊಲೀಸರೊಂದಿಗೆ ಓಟ” 5k & 10k ಮ್ಯಾರಥಾನ್ ಓಟದ ಸ್ಪರ್ದೆಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲಾ ವಯೋಮಾನದವರು ಭಾಗವಹಿಸಬಹುದಾಗಿದೆ.

ವಿಶೇಷವಾಗಿ ಮಹಿಳೆಯರಿಗಾಗಿಯೇ 5k ಮ್ಯಾರಥಾನ್ ಓಟದ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಂಸನೀಯ ಪತ್ರ ಹಾಗೂ ನಗದು ಬಹುಮಾನ ನೀಡಲಾಗುವುದು.

ಆಸಕ್ತರು ಮೇಲೆ ನೀಡಲಾದ Link / Qr code Scan ಮಾಡುವ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. Link:https://docs.google.com/…/1FAIpQLSepfh7wn9uLj7, https://docs.google.com ಇಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು.

5ಕೆ ಓಟದಲ್ಲಿ ಪ್ರಥಮ ಬಹುಮಾನ 10 ಸಾವಿರ ರೂಪಾಯಿ, 10ಕೆ ಓಟದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 20 ಸಾವಿರ ರೂಪಾಯಿ ನೀಡಲಾಗುತ್ತದೆ. ಅದೇ ರೀತಿಯಲ್ಲಿ ದ್ವಿತೀಯ ಹಾಗೂ ತೃತೀಯ ಬಹುಮಾನ ಎರಡೂ ವಿಭಾಗಗಳಲ್ಲಿಯೂ ನೀಡಲಾಗುತ್ತದೆ ಎಂದು ಎಸ್ಪಿ ಉಮಾ ಪ್ರಶಾಂತ್ ಅವರು ತಿಳಿಸಿದ್ದಾರೆ.

Exit mobile version