SUDDIKSHANA KANNADA NEWS/ DAVANAGERE/ DATE:27-01-2025
ದಾವಣಗೆರೆ: ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಅಕ್ರಮ ಮರಳು ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಸೋಮವಾರ ಮಧ್ಯಾಹ್ನ ಸಮಯದಲ್ಲಿ ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಇಂಗಳಗೊಂದಿ ಗ್ರಾಮದ ಬಳಿಯ ತುಂಗಭದ್ರಾ ನದಿ ದಂಡೆಯಲ್ಲಿ ಯಾರೋ ಅಪರಿಚತರು ಮರಳನ್ನು ಅಕ್ರಮವಾಗಿ ಸಾಗಣಿಕೆ ಮಾಡಿ ಲಾಭ ಮಾಡಿಕೊಳ್ಳುವ ದುರುದ್ದೇಶದಿಂದ ಮರಳನ್ನು ಸಂಗ್ರಹಿಸಿಟ್ಟಿದ್ದ ಸ್ಥಳದ ಮೇಲೆ ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ ಮಾರ್ಗದರ್ಶನದಲ್ಲಿ ಮಲೇಬೆನ್ನೂರು ಪೊಲೀಸ್ ಠಾಣೆಯ ಪಿ.ಎಸ್.ಐ ಪ್ರಭು ಡಿ. ಕೆಳಗಿನಮನಿ ರವರೊಳಗೊಂಡ ತಂಡವು ದಾಳಿ ಮಾಡಿ ಅಂದಾಜು ಬೆಲೆ 90,000 ರೂಪಾಯಿ ಮೌಲ್ಯದ ಸುಮಾರು 60 ಮೆಟ್ರಿಕ್ ಟನ್ ಮರಳು ವಶ ಪಡಿಸಿಕೊಳ್ಳಲಾಗಿದೆ.
ಅಕ್ರಮ ಮರಳು ಸಾಗಣೆ ತಡೆ ಮತ್ತು ಅಕ್ರಮ ಕಾನೂನು ಬಾಹಿರ ಚಟುವಟಿಕೆಗಳ ತಡೆಗೆ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್. ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ. ಸಂತೋಷ, ಜಿ. ಮಂಜುನಾಥ, ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಬಸವರಾಜ್ ಬಿ.ಎಸ್. ಮಾರ್ಗದರ್ಶನದಲ್ಲಿ ಹರಿಹರ ವೃತ್ತ ನಿರೀಕ್ಷಕ ಸುರೇಶ ಸಗರಿ, ಮಲೇಬೆನ್ನೂರು ಪಿ.ಎಸ್.ಐ ಪ್ರಭು ಡಿ. ಕೆಳಗಿನಮನಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.
ಈ ಬಗ್ಗೆ ಮಲೇಬೆನ್ನೂರು ಪೊಲೀಸ್ ಠಾಣೆಯ ಗುನ್ನೆ ನಂ: 19/2025 ಕಲಂ: 303 (2) ಬಿ.ಎನ್.ಎಸ್ ರೀತ್ಯಾ ಪ್ರಕರಣ ದಾಖಲಿಸಲಾಗಿದೆ. ಈ ಅಕ್ರಮ ಮರಳು ಸಂಗ್ರಹಣೆ ಮೇಲಿನ ಕಾರ್ಯಾಚರಣೆಯಲ್ಲಿ ಮೇಲಾಧಿಕಾರಿಗಳು ಸೇರಿದಂತೆ
ಪಿ.ಎಸ್.ಐ ಚಿದಾನಂದಪ್ಪ, ಸಿಬ್ಬಂದಿಯವರಾದ ವೆಂಕಟೇಶ್, ನಿಂಗರಾಜು, ಮಲ್ಲಿಕಾರ್ಜುನ, ನಾಗರಾಜ್ ಜೀಪ್ ಚಾಲಕರಾದ ರಾಜಪ್ಪ, ಮುರುಳೀಧರ ಅವರ ತಂಡವು ಭೇದಿಸುವಲ್ಲಿ ಯಶಸ್ವಿಯಾಗಿದ್ದು ಈ ಪತ್ತೆ ಕಾರ್ಯಕ್ಕೆ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.