ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಇಸ್ಫೀಟ್ ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ: 13 ಆರೋಪಿಗಳ ಬಂಧನ, ವಶಪಡಿಸಿಕೊಂಡ ಹಣವೆಷ್ಟು ಗೊತ್ತಾ..?

On: January 30, 2025 12:43 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:30-01-2025

ದಾವಣಗೆರೆ: ಇಸ್ಪೀಟ್ ಜೂಟಾಟದ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು 13 ಆರೋಪಿಗಳನ್ನು ಬಂಧಿಸಿ, 2 ಲಕ್ಷದ ಐದು ಸಾವಿರ ರೂಪಾಯಿ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

ಬುಧವಾರ ಸಂಜೆ ದಾವಣಗೆರೆ ತಾಲೂಕಿನ ಹಿಂಡಸಕಟ್ಟೆಯಿಂದ ಕ್ಯಾತನಹಳ್ಳಿ ಕಡೆಗೆ ಹೋಗುವ ರಸ್ತೆಯಲ್ಲಿ ಇಸ್ಫೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಈ ದಾಳಿ ನಡೆದಿದೆ.

ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಡಿವೈಎಸ್ಪಿ ಪದ್ಮಶ್ರೀ ಗುಂಜಿಕರ್ ರವರ ನೇತೃತ್ವದಲ್ಲಿ ಪಿ.ಎಸ್.ಐ ಸುನೀಲ್ ಬಿ ತೇಲಿ ಹಾಗೂ ಸಿಬ್ಬಂದಿಗಳಾದ ಪ್ರಕಾಶ್, ಸುರೇಶ್, ಗೋವಿಂದರಾಜು, ಮುತ್ತುರಾಜು, ಬುಡೇನ್ ವಲಿ, ಲೋಹಿತ್, ಮಲ್ಲಿಕಾರ್ಜುನ, ಶಿವಕುಮಾರ, ಅಂಜಿನಪ್ಪರವರನ್ನು ಒಳಗೊಂಡ ತಂಡವು ದಾಳಿ ನಡೆಸಿತ್ತು.

ಸ್ಥಳಕ್ಕೆ ಭೇಟಿ ನೀಡಿದಾಗ ಇಸ್ಫೀಟ್ ಜೂಜಾಟದಲ್ಲಿ ತೊಡಗಿದ್ದ 13 ಆರೋಪಿತರನ್ನು ವಶಕ್ಕೆ ಪಡೆದು ಆರೋಪಿತರಿಂದ ಇಸ್ಫೀಟ್ ಜೂಜಾಟದಲ್ಲಿ ತೊಡಗಿಸಿದ್ದ 2,05,000 ನಗದು ಹಣ, ಇಸ್ಫೀಟ್ ಕಾರ್ಡ್ ಗಳನ್ನು ವಶಕ್ಕೆ ಪಡೆದಿದ್ದು ಆರೋಪಿತರ ವಿರುದ್ಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕಲಂ 87 ಕೆ.ಪಿ. ಆಕ್ಟ್ ರೀತ್ಯಾ ಪ್ರಕರಣ ದಾಖಲಿಸಲಾಗಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment