Home ದಾವಣಗೆರೆ ದಾವಣಗೆರೆ ದಕ್ಷಿಣ ಉಪಚುನಾವಣೆ: ಏಪ್ರಿಲ್ 1ರಂದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ
ದಾವಣಗೆರೆಬೆಂಗಳೂರು

ದಾವಣಗೆರೆ ದಕ್ಷಿಣ ಉಪಚುನಾವಣೆ: ಏಪ್ರಿಲ್ 1ರಂದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ

Share
ದಾವಣಗೆರೆ
Share

ದಾವಣಗೆರೆ: ಇದೇ ಏಪ್ರಿಲ್ 9 ರಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಅವರ ಗೆಲುವಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಏಪ್ರಿಲ್ 1) ಜಿಲ್ಲೆಯಲ್ಲಿ ಮಿಂಚಿನ ಸಂಚಾರ ನಡೆಸಲಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಅವರು ಮುಖ್ಯಮಂತ್ರಿಗಳ ಪ್ರವಾಸದ ವಿವರಗಳನ್ನು ಹಂಚಿಕೊಂಡಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಸಿಎಂ, ದಕ್ಷಿಣ ಕ್ಷೇತ್ರದ ಗ್ರಾಮಾಂತರ ಪ್ರದೇಶಗಳಲ್ಲಿ ಬೃಹತ್ ರೋಡ್ ಷೋ ನಡೆಸಲಿದ್ದಾರೆ.

ಪ್ರಚಾರದ ಹಾದಿ:

ಮುಖ್ಯಮಂತ್ರಿಗಳು ನಾಗನೂರು, ಶಿರಮಗೊಂಡನಹಳ್ಳಿ, 6ನೇ ಮೈಲಿಕಲ್ಲು, ಹಳೇ ಬೆಳವನೂರು, ತುರ್ಚಘಟ್ಟ ಹಾಗೂ ಹೊಸ ನಾಯಕನಹಳ್ಳಿ ಗ್ರಾಮಗಳಲ್ಲಿ ಸಂಚರಿಸಿ ಮತಯಾಚನೆ ಮಾಡಲಿದ್ದಾರೆ. ರೋಡ್ ಷೋ ನಂತರ ಹದಡಿ ಗ್ರಾಮದಲ್ಲಿ ಆಯೋಜಿಸಲಾದ ಸಾರ್ವಜನಿಕ ಸಭೆಯಲ್ಲಿ ಅವರು ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಸೇರಿದಂತೆ ಹಲವು ಸಚಿವರು ಮತ್ತು ಶಾಸಕರು ಸಾಥ್ ನೀಡಲಿದ್ದಾರೆ. ಈ ಶಕ್ತಿ ಪ್ರದರ್ಶನದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಪದಾಧಿಕಾರಿಗಳು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ.

Share

Leave a comment

Leave a Reply

Your email address will not be published. Required fields are marked *