Home ದಾವಣಗೆರೆ ನಾನೇ ಸಿಎಂ ಆಗಿ ಅವಧಿ ಪೂರ್ಣಗೊಳಿಸೋ ವಿಶ್ವಾಸ ಇದೆ, ನನಗೆ ರಾಜಕಾರಣ ತೃಪ್ತಿ ತಂದಿದೆ: ಅಡ್ಡಗೋಡೆ ಮೇಲೆ ದೀಪವಿಟ್ಟ ಸಿಎಂ ಸಿದ್ದರಾಮಯ್ಯ!
ದಾವಣಗೆರೆನವದೆಹಲಿಬೆಂಗಳೂರು

ನಾನೇ ಸಿಎಂ ಆಗಿ ಅವಧಿ ಪೂರ್ಣಗೊಳಿಸೋ ವಿಶ್ವಾಸ ಇದೆ, ನನಗೆ ರಾಜಕಾರಣ ತೃಪ್ತಿ ತಂದಿದೆ: ಅಡ್ಡಗೋಡೆ ಮೇಲೆ ದೀಪವಿಟ್ಟ ಸಿಎಂ ಸಿದ್ದರಾಮಯ್ಯ!

Share
Share

ಮೈಸೂರು: ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ. ಜನರ ಕೆಲಸ ಮಾಡುವುದು ಖುಷಿಯ ಸಂಗತಿ. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಕೆಲಸ ಮಾಡಿಕೊಡುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಅಡ್ಡಗೋಡೆ ಮೇಲೆ ದೀಪವಿಟ್ಟವಂತೆ ಮಾತನಾಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು
ಸಾಧ್ಯವಾಯಿತು ಎಂದರು.

ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದು ಕಾಲಘಟ್ಟ ಬೇರೆ ಬೇರೆ. 1972ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಆಗಿದ್ದೇನೆ ಎಂದು ತಿಳಿಸಿದರು.

ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ:

ಮುಖ್ಯಮಂತ್ರಿಯಾಗಿ ಅವಧಿಯನ್ನು ಪರಿಪೂರ್ಣ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಆ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ ಎಂದರು. ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದರು.

ನಾಟಿಕೋಳಿ ಪಲಾವ್ ಬಗ್ಗೆ ಏನಂದ್ರು ಸಿದ್ದು?

ಮುಖ್ಯಮಂತ್ರಿಗಳ ಅಭಿಮಾನಿಗಳು ನಾಟಿ ಕೋಳಿ ಪಲಾವ್ ಹಂಚಿರುವ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ ನನಗೆ ಈ ಬಗ್ಗೆ ತಿಳಿದಿಲ್ಲ ಎಂದ ಮುಖ್ಯಮಂತ್ರಿಗಳು ಸಾಮಾನ್ಯವಾಗಿ ಹಳ್ಳಿಗಳಲ್ಲಿ ನೆಂಟರು ಬಂದಾಗ ಮಾತ್ರ ನಾಟಿ ಕೋಳಿ ಅಡುಗೆ ಮಾಡುತ್ತಾರೆ. ನಾನೂ ಹಳ್ಳಿಯವನಾಗಿರುವುದರಿಂದ ಸಹಜವಾಗಿ ನಾಟಿ ಕೋಳಿ, ರಾಗಿ ರಾಗಿ ಮುದ್ದೆ ತಿನ್ನುತ್ತಿದ್ದೆ. ಹಳ್ಳಿಯವರ ಊಟದ ಕ್ರಮ ಇದಾಗಿದ್ದು, ನಾನು ಮುಖ್ಯಮಂತ್ರಿಯಾಗಿರುವುದರಿಂದ ಸ್ವಲ್ಪ ಪ್ರಚಾರ ಸಿಗುತ್ತಿದೆ ಎಂದರು.

Share

Leave a comment

Leave a Reply

Your email address will not be published. Required fields are marked *