Site icon Kannada News-suddikshana

ಧರ್ಮಸ್ಥಳದ ವಿಚಾರದಲ್ಲಿ ರಾಜಕಾರಣ ಬರಬಾರದು: ಡಿ. ಕೆ. ಶಿವಕುಮಾರ್

ಧರ್ಮಸ್ಥಳ

SUDDIKSHANA KANNADA NEWS/ DAVANAGERE/DATE:18_08_2025

ಬೆಂಗಳೂರು: ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು ಧರ್ಮದಲ್ಲಿ ರಾಜಕಾರಣ ಇರಬಾರದು. ಬಿಜೆಪಿಯವರು ಧರ್ಮದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಧರ್ಮಸ್ಥಳದ ಬಗ್ಗೆ ರಾಜಕಾರಣ ಸಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.

READ ALSO THIS STORY: ಡಿ. ಕೆ. ಶಿವಕುಮಾರ್ ಆಪ್ತ, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಗೆ ಶಾಕ್ ಕೊಟ್ಟ ಕಾಂಗ್ರೆಸ್ ಶಿಸ್ತು ಸಮಿತಿ!

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಧರ್ಮ ಇರಬೇಕಾಗಿತ್ತು. ಆದರೆ ಬಿಜೆಪಿಯವರು ಧರ್ಮದಲ್ಲಿ ರಾಜಕಾರಣ ಮಾಡಲು ಹೊರಟಿದ್ದಾರೆ. ಬಿಜೆಪಿಯವರು ರಾಜಕಾರಣ ಮಾಡಬಾರದು
ಎಂದು ಹೇಳಿದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಧರ್ಮಸ್ಥಳ ವಿಚಾರ ಕುರಿತಂತೆ ಸಮಗ್ರ ಮಾಹಿತಿ ನೀಡಲಿದ್ದಾರೆ. ಎಲ್ಲಾ ವಿಚಾರಗಳನ್ನೂ ಮಂಡನೆ ಮಾಡಲಿದ್ದಾರೆ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

Exit mobile version