Home ದಾವಣಗೆರೆ ತಮಿಳುನಾಡು ಸರ್ಕಾರ ರಚನೆಯಲ್ಲಿ ಹೈಡ್ರಾಮಾ: ರಾಜ್ಯಪಾಲರನ್ನು ಭೇಟಿಯಾದ ವಿಜಯ್!
ದಾವಣಗೆರೆನವದೆಹಲಿಬೆಂಗಳೂರುಸಿನಿಮಾ

ತಮಿಳುನಾಡು ಸರ್ಕಾರ ರಚನೆಯಲ್ಲಿ ಹೈಡ್ರಾಮಾ: ರಾಜ್ಯಪಾಲರನ್ನು ಭೇಟಿಯಾದ ವಿಜಯ್!

Share
ತಮಿಳುನಾಡು
Share

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಫಲಿತಾಂಶದ ನಂತರ ಸರ್ಕಾರ ರಚನೆಯ ಪ್ರಕ್ರಿಯೆಯಲ್ಲಿ ತೀವ್ರ ಕುತೂಹಲ ಮೂಡಿದೆ.

‘ತಮಿಳಗ ವೆಟ್ರಿ ಕಳಗಂ’ (TVK) ಮುಖ್ಯಸ್ಥ ದಳಪತಿ ವಿಜಯ್ ಅವರು ಇಂದು ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ.

ಟಿವಿಕೆ ಪಕ್ಷವು 108 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ, ಬಹುಮತಕ್ಕೆ ಬೇಕಾದ 118ರ ಗಡಿ ತಲುಪಲು ಇನ್ನು 10 ಸ್ಥಾನಗಳ ಕೊರತೆಯಿದೆ.

ಕಾಂಗ್ರೆಸ್‌ನ 5 ಶಾಸಕರು ವಿಜಯ್‌ಗೆ ಬೆಂಬಲ ಘೋಷಿಸಿದ್ದು, ಸಂಖ್ಯಾಬಲ 113ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಎಡಪ್ಪಾಡಿ ಪಳನಿಸ್ವಾಮಿ (EPS) ನೇತೃತ್ವದ AIADMK ಕೂಡ ರಾಜ್ಯಪಾಲರ ಭೇಟಿಗೆ ಸಮಯ ಕೇಳಿರುವುದು ಮತ್ತು ತನ್ನ ಶಾಸಕರನ್ನು ಪುದುಚೇರಿ ರೆಸಾರ್ಟ್‌ಗೆ ಸ್ಥಳಾಂತರಿಸಿರುವುದು ‘ರೆಸಾರ್ಟ್ ರಾಜಕೀಯ’ಕ್ಕೆ ನಾಂದಿ ಹಾಡಿದೆ.

ಶುಕ್ರವಾರ ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.

Share

Leave a comment

Leave a Reply

Your email address will not be published. Required fields are marked *