ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ.. ಹಾಡಿಹೊಗಳಿದ ಶಾಮನೂರು ಶಿವಶಂಕರಪ್ಪ: ಸಿಎಂ ಮುಂದೆ ಇಟ್ಟ ಮತ್ತೊಂದು ಬೇಡಿಕೆ ಏನು…?

On: March 7, 2024 3:26 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:07-03-2024

ಬೀದರ್: ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಬೆಂಕಿಯುಗುಳಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಬೀದರ್ ನಲ್ಲಿ ನಡೆದ ಸಮಾರಂಭದಲ್ಲಿ ಮನದುಂಬಿ ಹಾಡಿಹೊಗಳಿದ್ದಾರೆ. ಮಾತ್ರವಲ್ಲ, ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದರು.

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮಾತನಾಡಿದರು.

ಸಮಾನತೆಯ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂಬ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಬಸವಾದಿಗಳು ಚಿರಋಣಿಯಾಗಿರುತ್ತೇವೆ. ಅಭಿನಂದನೆ ಸಲ್ಲಿಸುತ್ತೇವೆ ಎಂದು ಶಾಮನೂರು ಶಿವಶಂಕರಪ್ಪ ಅವರು ಹೇಳಿದರು. ಇದೇ ವೇಳೆ ಎಲ್ಲಾ ಕಡೆಗಳಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಭವನ ನಿರ್ಮಾಣ ಮಾಡಿರುವಂತೆ ಪ್ರತಿಯೊಂದು ಜಿಲ್ಲೆಗಳಲ್ಲಿಯೂ ಬಸವ ಭವನ ನಿರ್ಮಾಣ ಮಾಡಲು ಸಿಎಂ ಸಿದ್ದರಾಮಯ್ಯ ಅವರು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಜನಪ್ರಿಯ ಸಿಎಂ ಸಿದ್ದರಾಮಯ್ಯನವರೇ ಎಂದು ಸಂಬೋಧಿಸಿದ ಶಾಮನೂರು ಶಿವಶಂಕರಪ್ಪ ಅವರು, ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ, ಜನರಿಗೆ ತಲುಪಿಸುತ್ತಿರುವ ಸಿದ್ದರಾಮಯ್ಯ ಅವರ ಕಾರ್ಯ ಪ್ರಶಂಸನಾರ್ಹ. ಬಡವರು, ಹಿಂದುಳಿದ ವರ್ಗದವರು, ದೀನದಲಿತರು, ಮಹಿಳೆಯರು ಸೇರಿದಂತೆ ಎಲ್ಲಾ ವರ್ಗವರಿಗೆ ನೆರವಾಗಿದ್ದಾರೆ. ಈ ಮೂಲಕ ಕ್ರಾಂತಿಕಾರಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ ಹಾಗೂ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂಬ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಈ ಅಭಿನಂದನಾ ಕಾರ್ಯಕ್ರಮ ಅರ್ಥಪೂರ್ಣವಾದದ್ದು. ಹೃದಯಪೂರ್ವಕವಾಗಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ್ದೇನೆ ಎಂದು ಹೇಳಿದರು.

12ನೇ ಶತಮಾನದಲ್ಲಿ ಸಮಾಜದಲ್ಲಿನ ಮೌಢ್ಯತೆ, ಅಂಧಕಾರ, ಸಮಾನತೆ, ಸ್ತ್ರೀ ಕುಲಕ್ಕೆ ಶಕ್ತಿ ನೀಡುವ ಕೆಲಸ ಮಾಡಿದ್ದ ಬಸವಣ್ಣನವರು ಅನುಭವ ಮಂಟಪ ರಚಿಸಿದವರು. ಪ್ರಜಾಸತ್ತಾತ್ಮಕ ವ್ಯವಸ್ಥೆ ಜಾರಿಗೊಳಿಸುವಂಥ ಕ್ರಾಂತಿಕಾರಕ ನಿರ್ಧಾರ ಮಾಡಿದ್ದರು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕೆಂದು ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24 ನೇ ಮಹಾಅಧಿವೇಶನದಲ್ಲಿ ಒತ್ತಾಯ ಮಾಡಿದ್ದೆವು. ಸರ್ಕಾರಕ್ಕೂ ಈ ಸಂಬಂಧ ಮನವಿ ಸಲ್ಲಿಸಿದ್ದೇವೆ. ಸಿದ್ದರಾಮಯ್ಯ ಅವರು ನಮ್ಮ ಬೇಡಿಕೆಗೆ ಮನ್ನಣೆ ಕೊಟ್ಟು ಈಡೇರಿಸಿದ್ದಾರೆ. ಹಾಗಾಗಿ, ಅವರು ಅಭಿನಂದಾರ್ಹರು ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಚಾರಿತ್ರಿಕ ಸಂಗತಿಗಾಗಿ 160 ಮಂದಿ ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ- ಲಿಂಗಾಯತ ಮಠಾಧೀಶರ ನೇತೃತ್ವದಲ್ಲಿ
ಮುಖ್ಯಮಂತ್ರಿಗಳಿಗೆ ಅಭೂತಪೂರ್ವ ಸನ್ಮಾನ ಮಾಡಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಬಸವಕಲ್ಯಾಣದಲ್ಲಿ ಬೃಹತ್ ಸನ್ಮಾನ ಸ್ವೀಕರಿಸಿದರು. ವಿಶ್ವ ಬಸವ ಧರ್ಮ ಟ್ರಸ್ಟ್, ಅನುಭವ ಮಂಟಪ – ಬಸವಕಲ್ಯಾಣ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಮುಖ್ಯಮಂತ್ರಿಗಳಿಗೆ ಸನ್ಮಾನಿಸಲಾಯಿತು.

ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ದರಾಜಯೋಗೀಂದ್ರ ಮಹಾಸ್ವಾಮೀಜಿ , ಜಗದ್ಗುರು ಬಸವಜಯಮೃತ್ಯುಂಜಯ ಮಹಾಸ್ವಾಮಿಗಳು, ಜಗದ್ಗುರು ಡಾ.ಮಾತೆ ಗಂಗಾದೇವಿ, ಜಗದ್ಗುರು ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಷ.ಬ್ರ.ರಾಜೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿ 160 ಮಂದಿ ಶರಣ ಗುರುಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದರು.

ಬಸವಕಲ್ಯಾಣ ಅನುಭವ ಮಂಟಪದ ವಿಶ್ವ ಬಸವ ಧರ್ಮ ಟ್ರಸ್ಟ್‍ನ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದೇವರು ಮತ್ತು 150 ಕ್ಕೂ ಹೆಚ್ಚು ಶರಣಗುರುಗಳು, ಸ್ವಾಮೀಜಿಗಳು ಉಪಸ್ಥಿತರಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹರಸಿದರು.

ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷರು ಹಾಗೂ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಉದ್ಘಾಟಿಸಿದರು. ರ್ಯಕ್ರಮದ ಅಧ್ಯಕ್ಷತೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಅವರು ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಬಿ.ಆರ್.ಪಾಟೀಲ್, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಡಾ. ಗೊ.ರು.
ಚನ್ನಬಸಪ್ಪ, ಬಸವ ಸಮಿತಿಯ ಅಧ್ಯಕ್ಷ ಡಾ. ಅರವಿಂದ ಜತ್ತಿ , ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಪೌರಾಡಳಿತ, ಹಜ್ ಸಚಿವ ರಹೀಂಖಾನ್, ಮಾಜಿ ಸಚಿವ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ್, ವಿಜಯ್ ಸಿಂಗ್, ಶಾಸಕ ಚನ್ನಾರೆಡ್ಡಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ವಿಶ್ವಬಸವ ಧರ್ಮ ಟ್ರಸ್ಟ್‍ನ ಹಾಗೂ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಮತ್ತು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ವೈಭವದ ವೇದಿಕೆಯಲ್ಲಿ
ಮುಖ್ಯಮಂತ್ರಿಗಳು ಸನ್ಮಾನಿಸಲ್ಪಟ್ಟರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment