ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಹಾಳಾದ ಬೀದಿ ದೀಪಗಳಿಂದ ಮಕ್ಕಳು, ಮಹಿಳೆಯರು ಓಡಾಡಲು ಭಯ: ದುರಸ್ತಿಗೊಳಿಸುವಂತೆ ಡಾ. ಪ್ರಭಾ ಮಲ್ಲಿಕಾರ್ಜುನ್ ಕಟ್ಟಪ್ಪಣೆ!

On: October 9, 2025 8:59 PM
Follow Us:
ಪ್ರಭಾ ಮಲ್ಲಿಕಾರ್ಜುನ್
---Advertisement---

SUDDIKSHANA KANNADA NEWS/DAVANAGERE/DATE:09_10_2025

ದಾವಣಗೆರೆ: ನಗರ ಪ್ರದೇಶಗಳಲ್ಲಿ ಬೀದಿ ದೀಪಗಳು ಹಾಳಾಗಿದ್ದು, ಇದರಿಂದ ಶಾಲಾ ಮಕ್ಕಳಿಗೆ, ಮಹಿಳೆಯರಿಗೆ, ಸಾರ್ವಜನಿಕರಿಗೆ ರಾತ್ರಿ ಸಮಯದಲ್ಲಿ ಭಯ ಭೀತಿಯಿಂದ ಸಂಚರಿಸುವಂತಾಗಿದೆ. ಆದ್ದರಿಂದ ಸಂಬಂಧಿಸಿದ
ಇಲಾಖೆಯವರು ತ್ವರಿತವಾಗಿ ಬೀದಿ ದೀಪಗಳನ್ನು ದುರಸ್ತಿಗೊಳಿಸಿ, ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ತಾಕೀತು ಮಾಡಿದರು.

READ ALSO THIS STORY: ಪಡಿತರ ಫಲಾನುಭವಿಗಳಿಗೆ ಸಿಗಲಿದೆ ಆಹಾರ ಕಿಟ್: ಏನೇನು ಸಿಗುತ್ತೆ ಗೊತ್ತಾ?

ಅವರು ಜಿಲ್ಲಾ ಪಂಚಾಯಿತ್‌ನ ಎಸ್.ಎಸ್.ಮಲ್ಲಿಕಾರ್ಜುನ ಸಭಾಂಗಣದಲ್ಲಿ ಆಯೋಜಿಸಿದ್ದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಅಪಘಾತಕ್ಕೊಳಗಾದವರಿಗೆ ಗೋಲ್ಡನ್ ಅವರ್ ಆಗಿರುತ್ತದೆ. ಅಂತವರಿಗೆ ಪ್ರಥಮ ಚಿಕಿತ್ಸೆ ನೀಡಲು ಸಹಕರಿಸಿ ಜೀವ ಉಳಿಸಬೇಕು. ಒಂದು ವೇಳೆ ತಡವಾದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಜೀವ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದರು.

ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ 846 ಕಾಮಗಾರಿಗಳ ಗುರಿ ಹೊಂದಿದ್ದು, ಜೂನ್ ಅಂತ್ಯಕ್ಕೆ 676 ಕಾಮಗಾರಿಗಳು ಪೂರ್ಣಗೊಂಡು, 146 ಕಾಮಗಾರಿ ಪ್ರಗತಿಯಲ್ಲಿವೆ. ಇನ್ನುಳಿದ ಕಾಮಗಾರಿಗಳನ್ನು ತ್ವರಿತವಾಗಿ
ನಿಗದಿತ ಸಮಯದೊಳಗೆ ಪೂರ್ಣಗೊಳಿಸಲು ಶುದ್ದ ಹಾಗೂ ಸುಸ್ಥಿರ ನೀರು ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಎನ್.ಆರ್.ಎಲ್.ಎಂ ಯೋಜನೆಯಡಿ ಸ್ವ-ಸಹಾಯ ಸಂಘಗಳ ಮಹಿಳೆಯರು ತಯಾರಿಸುತ್ತಿರುವ ಬೆಡ್‌ಶೀಟ್, ಬಟ್ಟೆ, ಫಿನಾಯಲ್, ಸಿರಿಧ್ಯಾನ ತಿಂಡಿ ತಿನಿಸುಗಳು, ಬ್ಯಾಗ್, ಟೀ ಲೋಟ, ಚಟ್ನಿಪುಡಿ, ಉಪ್ಪಿನ ಕಾಯಿ, ಅಡುಗೆ ಪದಾರ್ಥಗಳು,
ಕರಕುಶಲ ವಸ್ತುಗಳು, ಆಟಿಕೆ ಗೊಂಬೆ, ಇನ್ನಿತರೆ ಗೃಹೋಪಯೋಗಿ ವಸ್ತುಗಳನ್ನು ತಯಾರಿಸಲಾಗುತ್ತಿದೆ. ಅವರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ ಆರ್ಥಿಕವಾಗಿ ಸಬಲೀಕರಣಗೊಳಿಸಬೇಕು. ಸರ್ಕಾರದ ಯಾವುದೇ ಸಭೆ, ಸಮಾರಂಭಗಳಿಗೆ
ಎಸ್‌ಹೆಚ್‌ಜಿ ಸಂಘಗಳಿಂದ ತಯಾರಿಸಿದ ವಸ್ತುಗಳನ್ನು ಖರೀದಿಸಿ, ಮಹಿಳಾ ಸ್ವ ಸಹಾಯ ಸಂಘ ಸಂಸ್ಥೆಗಳನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಜೊತೆಗೆ ಅವರ ಕಾಯಕಕ್ಕೆ ಮತ್ತಷ್ಟು ಉತ್ತೇಜನ ನೀಡಬೇಕು ಎಂದರು.

ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಾಂತನಗೌಡ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್‌ರಾವ್, ಅಪರ ಜಿಲ್ಲಾಧಿಕಾರಿ ಎಸ್.ಶಿವಕುಮಾರ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ದಿಶಾ ಸಮಿತಿ ಸದಸ್ಯರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment