ದಾವಣಗೆರೆ: ಕೇರಳದ ವಯನಾಡ್ ಲೋಕಸಭಾ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಅಭೂತಪೂರ್ವ ಜಯಗಳಿಸಿದ ಕಾಂಗ್ರೆಸ್ ನಾಯಕಿ ಶ್ರೀಮತಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ನವದೆಹಲಿಯಲ್ಲಿ ಅಭಿನಂದನೆಗಳನ್ನು ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ವಯನಾಡಿನಲ್ಲಿ ಸ್ಪರ್ಧಿಸಿ ಜಯಶಾಲಿಯಾಗಿರುವ ನಮ್ಮೆಲ್ಲರ ನೆಚ್ಚಿನ ನಾಯಕಿಯಾದ ಶ್ರೀಮತಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಗೆಲುವು ನಮಗೆಲ್ಲಾ ಮತ್ತಷ್ಟು ಶಕ್ತಿ ತಂದಿದೆ.ಈ ಗೆಲುವು ಪ್ರಿಯಾಂಕಾ ಗಾಂಧಿಯವರ ಶ್ರದ್ಧೆ, ಕಾರ್ಯಕ್ಷಮತೆ ಮತ್ತು ಜನಪ್ರಿಯತೆಯ ಸಂಕೇತವಾಗಿದೆ ಹಾಗೂ ಅವರ ಜೊತೆಗೆ ಜನರ ಧ್ವನಿಯಾಗಿ ಸಂಸತ್ತಿನಲ್ಲಿ ಕಾರ್ಯನಿರ್ವಹಿಸಲು ಕಾತುರದಿಂದ ಕಾಯುತ್ತಿದ್ದೇವೆ ಎಂದಿದ್ದಾರೆ.