Site icon Kannada News-suddikshana

ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

SUDDIKSHANA KANNADA NEWS/ DAVANAGERE/ DATE:20-01-2025

ದಾವಣಗೆರೆ: ದಾವಣಗೆರೆ ಲೋಕಸಭಾ ಸದಸ್ಯೆ  ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು  ಸಂಸತ್ತಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸ್ಥಾಯಿ ಸಮಿತಿಯ ಸದಸ್ಯರೊಂದಿಗೆ ಚೆನ್ನೈ ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದರು.

ಈ‌ ಸಭೆಯಲ್ಲಿ ಕೇಂದ್ರ ಸರ್ಕಾರ  ಆರೋಗ್ಯಕ್ಷೇತ್ರದಲ್ಲಿ ಜಾರಿಗೊಳಿಸಿರುವ ಯೋಜನೆಗಳು ಹಾಗೂ ಎಲ್ಲಾ ಯೋಜನೆಗಳು ಸಾಮಾನ್ಯ ಜನರಿಗೆ ತಲುಪಲು ಅನುಸರಿಸಬೇಕಾದ ಮಾರ್ಗ ಸೂಚಿಗಳ‌ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಇದರೊಂದಿಗೆ ಅನುಸರಿಸಬೇಕಾದ ಮಾರ್ಗಸೂಚನೆಗಳ ಬಗ್ಗೆ ತಿಳಿಸಲಾಯಿತು.

ಈ ಸಭೆಯ ಅಧ್ಯಕ್ಷತೆಯನ್ನು ಸಂಸತ್ ನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರೊ.ರಾಮ್ ಗೋಪಾಲ್ ಯಾದವ್ ವಹಿಸಿದ್ದರು. ಸಭೆಯಲ್ಲಿ ಸಮಿತಿಯ ಸದಸ್ಯರು ಹಾಗೂ ಲೋಕಸಭಾ ಸದಸ್ಯರು ಉಪಸ್ಥಿತರಿದ್ದರು ಎಂದು ಸಂಸದರ ಆಪ್ತ ಸಹಾಯಕರಾದ ಹರೀಶ್ ಕೆ. ಎಲ್. ಬಸಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version