Site icon Kannada News-suddikshana

ಮತಬೇಟೆಗೆ ಇಳಿದ ಡಾ. ಪ್ರಭಾ ಮಲ್ಲಿಕಾರ್ಜುನ್: ಸೂಕ್ತ ಅಭ್ಯರ್ಥಿಗೆ ಮತ ನೀಡುವಂತೆ ಮತಯಾಚನೆ

SUDDIKSHANA KANNADA NEWS/ DAVANAGERE/ DATE:24-03-2024

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಈಗಾಗಲೇ ಸಭೆ ಮೇಲೆ ಸಭೆ ನಡೆಸಿರುವ ಪ್ರಭಾ ಮಲ್ಲಿಕಾರ್ಜುನ್ ಅವರು ಮತದಾರರ ಮನಸೆಳೆಯಲು ಪ್ರಚಾರ ಚುರುಕುಗೊಳಿಸಿದ್ದಾರೆ.

ನನಗೆ ವೋಟ್ ಮಾಡಿ ಅಂತ ಕೇಳಲ್ಲ, ಸೂಕ್ತ ಅಭ್ಯರ್ಥಿ ಅನಿಸಿದರೆ ನನಗೆ ಮತದಾನ ಮಾಡಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಮನವಿ ಮಾಡಿದರು,

ಇಂದು ಬೆಳಗ್ಗೆ ಕುಂದವಾಡ ಕೆರೆಗೆ ಭೇಟಿ ನೀಡಿದ ಅವರು, ವಾಯುವಿಹಾರಿಗಳೊಂದಿಗೆ ಚರ್ಚೆ ನಡೆಸಿದರು. ದಾವಣಗೆರೆ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಒಮ್ಮೆ ನನಗೆ ಅವಕಾಶ ನೀಡಿ ಎಂದು ಕೇಳಿಕೊಂಡರು.

ಎಸ್.ಎಸ್ ಲೇಔಟ್ ನಲ್ಲಿರುವ ನೇತಾಜಿ ಸುಭಾಷ್ ಚಂದ್ರಬೋಸ್ ಒಳಾಂಗಣ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಕ್ಷೇತ್ರದ ಅಭಿವೃದ್ಧಿಗಾಗಿ ತಾವು ರೂಪಿಸಿರುವ ಕಾರ್ಯಕ್ರಮಗಳಿಗೆ ಬೆಂಬಲವಾಗಿ ತಮಗೆ ಮತ ಚಲಾಯಿಸಬೇಕಾಗಿ ಎಲ್ಲರಿಗೂ ಡಾ. ಪ್ರಭಾ ಮಲ್ಲಿಕಾರ್ಜುನ್ ಮನವಿ ಮಾಡಿದರು.

ಎಸ್. ಎಸ್. ಬಡಾವಣೆಯ ಕ್ಲಾಕ್ ಟವರ್ ಬಳಿಯಿರುವ ತರಕಾರಿ ಮಾರುಕಟ್ಟೆಗೆ ತೆರಳಿ ಸಾರ್ವಜನಿಕರು ಹಾಗೂ ವ್ಯಾಪಾರಿಗಳಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ ನೀಡುವ ಮೂಲಕ ಗೆಲ್ಲಿಸುವಂತೆ ವಿನಂತಿಸಿಕೊಂಡರು.

Exit mobile version