Site icon Kannada News-suddikshana

26,094 ಮತಗಳ ಅಂತರದಿಂದ ಡಾ. ಪ್ರಭಾ ಮಲ್ಲಿಕಾರ್ಜುನ್ ಜಯಭೇರಿ: ಗೆಲ್ಲಲು ಕಾರಣವೇನು ಗೊತ್ತಾ..?

SUDDIKSHANA KANNADA NEWS/ DAVANAGERE/ DATE:04-06-2024

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರವು ಬರೋಬ್ಬರಿ ಎರಡೂವರೆ ದಶಕಗಳ ಬಳಿಕ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, 26094 ಮತಗಳಿಂದ ಗೆದ್ದು ದಾವಣಗೆರೆ ಲೋಕಸಭಾ ಕ್ಷೇತ್ರದ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆಯೊಬ್ಬರು ಸಂಸತ್ ಪ್ರವೇಶಿಸಿದ್ದಾರೆ.

ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, 6,33,059 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಅವರು 6,06,965 ಮತಗಳು ಸಿಕ್ಕಿವೆ. ತೀವ್ರ ಸ್ಪರ್ಧೆ ಒಡ್ಡುತ್ತಾರೆ ಎಂದುಕೊಂಡಿದ್ದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್
ಕುಮಾರ್ ಅವರು 42,496 ಮತಗಳಷ್ಟೇ ಬಂದಿವೆ.

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿನ ಶಿವಗಂಗೋತ್ರಿಯಲ್ಲಿ ಮತ ಎಣಿಕೆ ಆರಂಭವಾಯಿತು. ಅಂಚೆ ಮತಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದರೆ, ಆ ಬಳಿಕ ಇವಿಎಂ ಮತಯಂತ್ರ ತೆರೆಯುತ್ತಿದ್ದಂತೆ ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.
ಪ್ರಭಾ ಮಲ್ಲಿಕಾರ್ಜುನ್ ಅವರು, 3641 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡರು. ಆ ನಂತರ ಮತ ಗಳಿಕೆ ಪಡೆಯುತ್ತಲೇ ಹೋದ ಪ್ರಭಾ ಮಲ್ಲಿಕಾರ್ಜುನ್ ಅವರು ನಾಲ್ಕನೇ ಸುತ್ತಿನಲ್ಲಿ ಹಿನ್ನೆಡೆ ಅನುಭವಿಸಬೇಕಾಯಿತು.

ಐದನೇ ಸುತ್ತಿನಿಂದ ಮುನ್ನಡೆ ಸಾಧಿಸಿದ್ದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಕೊನೆಯವರೂ ಮುನ್ನಡೆಯಲ್ಲಿಯೇ ಇದ್ದರು. ಕೊನೆ ಕ್ಷಣದಲ್ಲಿ ಬಿಜೆಪಿಗೆ ಹೆಚ್ಚು ಮತಗಳು ಬರಲಾರಂಭಿಸಿದವು. ಈ ವೇಳೆ ಕಾಂಗ್ರೆಸ್ ಪಾಳೆಯದಲ್ಲಿ ಆತಂಕ ಮನೆ ಮಾಡಿದ್ದರೆ, ಬಿಜೆಪಿ ಪಾಳೆಯದಲ್ಲಿ ಕೊನೆ ಕ್ಷಣದಲ್ಲಿಯಾದರೂ ಗೆಲ್ಲಬಹುದು ಎಂಬ ಮಾತು ಕೇಳಿ ಬಂತು. ಸತತವಾಗಿ ನಾಲ್ಕು ಬಾರಿ ಗೆದ್ದಿದ್ದ ಸಂಸದ ಸಿದ್ದೇಶ್ವರ ಅವರು ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದರು. ಆದರೆ, ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಸೋಲಿನಿಂದ ಬಿಜೆಪಿ ಭದ್ರಕೋಟೆ ಛಿದ್ರವಾಯಿತು.

Exit mobile version