ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸಿಇಸಿ ಸ್ಪಷ್ಟ ಉತ್ತರ ದೊರೆಯುವವರೆಗೆ ಮತದಾರರ ಹಕ್ಕುಗಳ ರಕ್ಷಣೆಗೆ ಹೋರಾಟ ಮುಂದುವರಿಯುತ್ತೆ: ಡಾ. ಪ್ರಭಾ ಮಲ್ಲಿಕಾರ್ಜುನ್

On: August 11, 2025 5:33 PM
Follow Us:
Prabha Mallikarjun
---Advertisement---

SUDDIKSHANA KANNADA NEWS/ DAVANAGERE/DATE:11_08_2025

ನವದೆಹಲಿ/ ದಾವಣಗೆರೆ: ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಆರೋಪಿಸಿರುವ ಮತಗಳ್ಳತನ ಕುರಿತಂತೆ ಇಸಿಐನಿಂದ ಸ್ಪಷ್ಟ ಉತ್ತರ ದೊರೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಪ್ರತಿಯೊಬ್ಬ ಮತದಾರರ
ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.

READ ALSO THIS STORY: BIG BREAKING: ರಾಹುಲ್ ಗಾಂಧಿ ಆರೋಪದ ‘ಮತ ಕಳ್ಳತನ’ ವಿರುದ್ಧ ಮಾತನಾಡಿದ್ದ ಸಚಿವ ಕೆ. ಎನ್. ರಾಜಣ್ಣ ತಲೆದಂಡ: ರಾಜೀನಾಮೆ ಅಂಗೀಕರಿಸಿದ ಸಿಎಂ!

2024 ರ ಲೋಕಸಭಾ ಚುನಾವಣೆಯಲ್ಲಿ ನಡೆದಿರುವ ಮತದಾರರ ವಂಚನೆ ಮತ್ತು ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ವಿರುದ್ದ 25 ವಿರೋಧ ಪಕ್ಷಗಳ 300 ಕ್ಕೂ ಹೆಚ್ಚು ಸಂಸದರೊಂದಿಗೆ ಸಂಸತ್ತಿನಿಂದ ಇಸಿಐ ಕೇಂದ್ರ ಕಚೇರಿವರೆಗೆ ಮೆರವಣಿಗೆ ನಡೆದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ,ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ನಮ್ಮ ನಾಯಕರೊಂದಿಗೆ ಜನತೆ ಮತ್ತು ರಾಜಕೀಯ ಪಕ್ಷಗಳು ಪರಿಶೀಲಿಸಲು ಸಾಧ್ಯವಾಗುವಂತೆ ಇಸಿ ಡಿಜಿಟಲ್ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಬೇಕೆಂದು ಅವರು ಒತ್ತಾಯಿಸಿದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, ಇದು ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ನನ್ನ ಹೋರಾಟವಾಗಿದೆ ಎಂದು ತಿಳಿಸಿದರು.

ಪ್ರತಿಭಟನೆಯ ಸಮಯದಲ್ಲಿ, ನಮ್ಮ ಮೈತ್ರಿಕೂಟದ ಸದಸ್ಯರು ಸೇರಿದಂತೆ ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲಾ ಸಂಸದರನ್ನು ಪೊಲೀಸ್ ಚೌಕಿಯಲ್ಲಿ ಬಂಧಿಸಲಾಯಿತು. ಸ್ವತಂತ್ರ ಚುನಾವಣಾ ಆಯೋಗದ ಮೇಲೆ ನಿರಂಕುಶ ಸರ್ಕಾರದ ನಿಯಂತ್ರಣದ ವಿರುದ್ಧ ನಾವು ರಸ್ತೆಗಳಲ್ಲಿ ಕುಳಿತು ಘೋಷಣೆಗಳನ್ನು ಸಹ ಕೂಗಿದೆವು ಎಂದು ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment