ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸೋತ ಬಳಿಕ ಏನೇನೋ ಹೇಳ್ತಾರೆ, 25 ವರ್ಷಗಳ ಬಳಿಕ ಕಾಂಗ್ರೆಸ್ ಯಾಕೆ ಗೆದ್ದಿದೆಯೆಂದು ಮನನ ಮಾಡಿಕೊಳ್ಳಲಿ: ಡಾ. ಪ್ರಭಾ ಮಲ್ಲಿಕಾರ್ಜುನ್ ತಿರುಗೇಟು

On: August 31, 2024 7:03 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:31-08-2024

ದಾವಣಗೆರೆ: ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಮೂರು ಬಾರಿ ಸೋಲು ಕಂಡಿದ್ದಾರೆ. ಇಪ್ಪತ್ತೈದು ವರ್ಷಗಳ ಬಳಿಕ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದೆ. ಯಾಕೆ ಸೋತೆವು ಎಂಬುದನ್ನು ಪರಾಜಿತ ಅಭ್ಯರ್ಥಿ ಮನನ ಮಾಡಿಕೊಳ್ಳಲಿ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, ಗಾಯಿತ್ರಿ ಸಿದ್ದೇಶ್ವರ ಅವರ ಹೆಸರು ಹೇಳದೇ ಕುಟುಕಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಚುನಾವಣೆಯಲ್ಲಿ ಸೋಲಿನ ಬಳಿಕ ಏನೇನೋ ಹೇಳಿದರೆ ಹೇಗೆ? ಅವರದ್ದೇ ಆದ ಧಾಟಿಯಲ್ಲಿ ಮಾತನಾಡುತ್ತಾರೆ ಎಂದು ತಿರುಗೇಟು ನೀಡಿದರು.

ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಇದ್ದದ್ದನ್ನು ಹೇಳುತ್ತಾ ಮತದಾರರಲ್ಲಿ ಮತ ನೀಡುವಂತೆ ಮನವಿ ಮಾಡಿದ್ದೇನೆ. ಜನರಿಗೆ ತಿಳಿಸುವುದು ನಮ್ಮ ಕೆಲಸ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದ್ದರೆ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಈಡೇರಿಸುವುದಾಗಿ ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ? ಮಹಿಳೆಯರಿಗೆ ಒಂದು ಲಕ್ಷ ರೂಪಾಯಿ ನೀಡುವ ಯೋಜನೆ ಘೋಷಿಸಲಾಗಿತ್ತು. ಚುನಾವಣೆ ವೇಳೆ ಪ್ರಶ್ನೆ ಮಾಡದವರು, ವಿರೋಧ ಮಾಡದವರು ಈಗ ಯಾಕೆ ಮಾಡುತ್ತಿದ್ದಾರೆ ಎಂದು ಪ್ರಭಾ ಮಲ್ಲಿಕಾರ್ಜುನ್ ಪ್ರಶ್ನಿಸಿದರು.

ಗಾಯಿತ್ರಿ ಸಿದ್ದೇಶ್ವರ ಅವರು, ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತದಾರರಿಗೆ ಆಮೀಷವೊಡ್ಡಿ ಗೆಲುವು ಸಾಧಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಪ್ರಭಾ ಮಲ್ಲಿಕಾರ್ಜುನ್ ಅವರು, ಬಿಜೆಪಿಯು ಭರವಸೆ ಕೊಟ್ಟಿರಲಿಲ್ವಾ ಎಂದು ಹೇಳಿದರು.

ಜನರು ಪ್ರತಿಯೊಂದನ್ನು ಗಮನಿಸುತ್ತಾರೆ. ಯಾರು ಏನು ಮಾತನಾಡುತ್ತಾರೆ ಎಂಬುದನ್ನು. ನಾನು ಮತದಾರರ ಬಳಿ ಹೇಳಿದ್ದು ರಾಜ್ಯ ಸರ್ಕಾರದ ಯೋಜನೆ ಅಲ್ಲ. ಇಂಡಿಯಾ ಒಕ್ಕೂಟ ನೀಡಿದ ಭರವಸೆ ಎಂದ ಅವರು, ಹೈಕೋರ್ಟ್ ನಿಂದ
ನನಗೆ ಯಾವುದೇ ನೊಟೀಸ್ ಬಂದಿಲ್ಲ. ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.

ಮುಡಾ ಪ್ರಕರಣ ಸಂಬಂಧ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ರಾಜ್ಯಪಾಲರು ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕೂಷನ್ ನೀಡಿರುವುದು ಸರಿಯಲ್ಲ. ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಪ್ರತಿಕ್ರಿಯೆ ನೀಡುವುದಿಲ್ಲ. ಆದ್ರೆ, ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಜಯ ಸಿಗುತ್ತದೆ. ಪಕ್ಷದ ಹೈಕಮಾಂಡ್ ಅವರ ಬೆಂಬಲಕ್ಕೆ ನಿಂತಿದೆ ಎಂದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment