SUDDIKSHANA KANNADA NEWS/ DAVANAGERE/ DATE:04-06-2024
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಗೆಲುವಿನತ್ತ ದಾಪುಗಾಲು ಇಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ 46 ಸಾವಿರ ಮತಗಳ ಅಂತರದಲ್ಲಿ ಪ್ರಭಾ ಮಲ್ಲಿಕಾರ್ಜುನ್ ಅವರು ಮುನ್ನಡೆ ಸಾಧಿಸಿದ್ದು, ಉತ್ತರ ವಿಧಾನಸಭಾ ಕ್ಷೇತ್ರ ಸೇರಿದಂತೆ ಮೂರು ಸುತ್ತಿನ ಮತ ಎಣಿಕೆ ಬಾಕಿ ಇದೆ.
ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಗೆಲುವಿನತ್ತ ದಾಪುಗಾಲು ಇಟ್ಟಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರದ ಇತಿಹಾಸದಲ್ಲಿ ಮಹಿಳೆಯೊಬ್ಬರು ಲೋಕಸಭಾ ಸದಸ್ಯರಾದ ಕೀರ್ತಿ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಸಲ್ಲುತ್ತದೆ.
ಗಾಯಿತ್ರಿ ಸಿದ್ದೇಶ್ವರ ಅವರು ಪೈಪೋಟಿ ನೀಡಿದ್ದು, ಕೊನೆ ಕ್ಷಣದಲ್ಲಿ ಚಮತ್ಕಾರ ನಡೆಯುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಸುಮಾರು 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಪ್ರಭಾ ಮಲ್ಲಿಕಾರ್ಜುನ್ ಅವರು ಗೆಲ್ಲಬಹುದು ಎಂಬ ಮಾಹಿತಿ ಸಿಕ್ಕಿದೆ.
ಗಾಯಿತ್ರಿ ಸಿದ್ದೇಶ್ವರ ಅವರೂ ತುಂಬಾನೇ ಪೈಪೋಟಿ ನೀಡಿದ್ದು, ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಹೆಚ್ಚಿನ ಮತಗಳು ಪಡೆಯದ ಕಾರಣ ಕಾಂಗ್ರೆಸ್ ಗೆ ಪ್ಲಸ್ ಆಗಿದೆ ಎಂದು ಹೇಳಲಾಗುತ್ತಿದೆ.
ದಾವಣಗೆರೆ ಲೋಕಸಭಾ ಕ್ಷೇತ್ರದ 15ನೇ ಸುತ್ತಿನ ಮತ ಎಣಿಕೆ ಮುಕ್ತಾಯ ಕಂಡಿದ್ದು, 37 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆಯನ್ನು ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಕಾಯ್ದುಕೊಂಡಿದ್ದಾರೆ.
14 ನೇ ಸುತ್ತಿನಲ್ಲಿ ಮತ ಎಣಿಕೆ ಮುಕ್ತಾಯವಾದಾಗ 33,369 ಮತಗಳನ್ನು ಪಡೆದಿದ್ದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, 15ನೇ ಸುತ್ತಿನ ಮತ ಎಣಿಕೆ ಮುಕ್ತಾಯಕ್ಕೆ 37 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಸಾಧಿಸಿದ್ದಾರೆ.
ಇನ್ನು ಐದು ಸುತ್ತಿನ ಮತ ಎಣಿಕೆ ಬಾಕಿ ಇದ್ದು, ಹಾವು- ಏಣಿ ಆಟ ಶುರುವಾಗಿದೆ. ಇನ್ನು ಐದು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯು ಹೆಚ್ಚು ಮುನ್ನಡೆ ಸಾಧಿಸಿದರೆ ಹೇಳಲು ಸಾಧ್ಯವಾಗದು. ಕಾಂಗ್ರೆಸ್ ನಲ್ಲಿ ಕ್ಷಣ ಕ್ಷಣಕ್ಕೂ ಕುತೂಹಲ ಗರಿಗೆದರಿದ್ದು, ಚುನಾವಣಾ ಫಲಿತಾಂಶ ಏನಾಗುತ್ತದೆಯೋ ಏನೋ ಎಂಬ ಕುತೂಹಲ ಗರಿಗೆದರಿದೆ.
ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ಬಿರುಸುಗೊಂಡಿದ್ದು, 9ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಭಾರೀ ಹಿನ್ನೆಡೆ ಅನುಭವಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಬರೋಬ್ಬರಿ 40 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ. 9ನೇ ಸುತ್ತಿನ ಮತ ಎಣಿಕೆ ಮುಕ್ತಾಯ ಕಂಡಿದ್ದು, ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು 40 ಸಾವಿರ ಮತಗಳಿಂದ ಮುಂದಿದ್ದು, ಬಿಜೆಪಿಗೆ ಭಾರೀ ಹಿನ್ನೆಡೆ ಆಗಿದೆ.