SUDDIKSHANA KANNADA NEWS/ DAVANAGERE/ DATE:04-06-2024
ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದ್ದು, ಮೊದಲನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದೆ. ಯಾವ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಪ್ಲಸ್ ಆಗಿದೆ ಎಂಬ ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ.
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರವು ಮೊದಲಿನಿಂದಲೂ ಲೋಕಸಭೆಗೆ ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿತ್ತು. ಬಹುತೇಕ ಅಂದರೆ ಶೇಕಡಾ 75ರಿಂದ 80 ರಷ್ಟು ಮತಗಳು ಬಿಜೆಪಿ ಪಾಲಾಗುತಿತ್ತು ಎನ್ನಲಾಗಿದೆ. ಆದ್ರೆ, ಈ ಬಾರಿ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ದಾವಣಗೆರೆ ಉತ್ತರದಲ್ಲಿ ಜೈ ಎಂದಿದ್ದಾನೆ. ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಅವರು ಪಡೆದ ಮತಗಳಿಗೆ ಸರಿಸಾಟಿಯಾಗಿ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಬಿದ್ದಿವೆ.
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಸಾದು ಲಿಂಗಾಯತ ಸಮುದಾಯದ ಮತಗಳು ಹೆಚ್ಚಿವೆ. ಮೊದಲಿನಿಂದಲೂ ಈ ಮತಗಳು ಬಿಜೆಪಿಯದ್ದೇ ಎಂಬುದು ಎಲ್ಲರಿಗೂ ಗೊತ್ತಿರುವ ಸತ್ಯ. ಆದ್ರೆ, ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಈ ಭಾಗಗಳಲ್ಲಿ ಮತದಾರ ಜೈ ಎಂದಿದ್ದಾನೆ. ಹಾಗಾಗಿ, ಪ್ರಭಾ ಮಲ್ಲಿಕಾರ್ಜುನ್ ಅವರು ಹೆಚ್ಚಿನ ಮತಗಳ ಮುನ್ನಡೆ ಪಡೆಯುತ್ತಿದ್ದಾರೆ. ಮತ ಎಣಿಕೆ ಇನ್ನೂ ಇದೆ. ಐದು ಸುತ್ತಿನ ಮತ ಎಣಿಕೆಯಲ್ಲಿ ಒಂದರಿಂದ ಎರಡು ಬಾರಿ ಮಾತ್ರ ಬಿಜೆಪಿ ಮುನ್ನಡೆ ಸಾಧಿಸಿದರೆ, ಉಳಿದಂತೆ ಕಾಂಗ್ರೆಸ್ ನ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಹೆಚ್ಚಿನ ಮತಗಳು ಬಂದಿವೆ.
ಮೊದಲ ಸುತ್ತಿನಲ್ಲಿ ದಾವಣಗೆರೆ ಉತ್ತರದಲ್ಲಿ ಕಾಂಗ್ರೆಸ್ ಗೆ 6293 ಮತಗಳು ಬಂದಿದ್ದರೆ, ಬಿಜೆಿಪಿಗೆ 4409 ಮತಗಳು ಬಿದ್ದಿವೆ. ಎರಡನೇ ಸುತ್ತಿನಲ್ಲಿ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ 6098 ಮತಗಳು ಬಂದಿದ್ದರೆ, ಗಾಯಿತ್ರಿ ಸಿದ್ದೇಶ್ವರ ಅವರಿಗೆ 4361 ಮತಗಳು ಬಂದಿವೆ. ಮೂರನೇ ಸುತ್ತಿನಲ್ಲಿ ಪ್ರಭಾ ಮಲ್ಲಿಕಾರ್ಜುನ್ ರಿಗೆ 6755 ಮತಗಳು ಬಂದಿದ್ದರೆ, ಗಾಯಿತ್ರಿ ಸಿದ್ದೇಶ್ವರ ಅವರು ಕೇವಲ 4561 ಮತಗಳನ್ನು ಪಡೆದಿದ್ದಾರೆ. ನಾಲ್ಕನೇ ಸುತ್ತಿನಲ್ಲಿ ಗಾಯಿತ್ರಿ ಸಿದ್ದೇಶ್ವರ ಅವರು 6608 ಮತಗಳನ್ನು ಪಡೆದಿದ್ದರೆ, ಪ್ರಭಾ ಮಲ್ಲಿಕಾರ್ಜುನ್ ಅವರಿಗೆ 4136 ಮತಗಳು ಬಂದಿವೆ. 5 ನೇ ಸುತ್ತಿನಲ್ಲಿ ಗಾಯಿತ್ರಿ ಸಿದ್ದೇಶ್ವರ ಅವರಿಗೆ 4980 ಮತಗಳು ಬಂದಿದ್ದರೆ, ಪ್ರಭಾ ಮಲ್ಲಿಕಾರ್ಜುನ್ ರಿಗೆ4929 ಮತಗಳು ಬಂದಿವೆ.
ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ಬಿರುಸುಗೊಂಡಿದ್ದು, 9ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಭಾರೀ ಹಿನ್ನೆಡೆ ಅನುಭವಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಬರೋಬ್ಬರಿ 40 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ. 9ನೇ ಸುತ್ತಿನ ಮತ ಎಣಿಕೆ ಮುಕ್ತಾಯ ಕಂಡಿದ್ದು, ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು 47 ಸಾವಿರಕ್ಕೂ ಹೆಚ್ಚು ಮತಗಳಿಂದ ಮುಂದಿದ್ದು, ಬಿಜೆಪಿಗೆ ಭಾರೀ ಹಿನ್ನೆಡೆ ಆಗಿದೆ.
40 ಸಾವಿರ ಮತಗಳ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಮುನ್ನುಗ್ಗುತ್ತಿರುವ ಕಾಂಗ್ರೆಸ್, ಮತಗಳ ಅಂತರವನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ. ಇದು ಬಿಜೆಪಿಗೆ ಹಿನ್ನೆಡೆ ತಂದಿದ್ದು, ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಅವರು ನಿರೀಕ್ಷಿಸಿದಷ್ಟು ಇದುವರೆಗೆ ಮತಗಳು ಬಂದಿಲ್ಲ.
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಬರೋಬ್ಬರಿ 29,046 ಮತಗಳ ಮುನ್ನಡೆ ಪಡೆಯುವ ಮೂಲಕ ಸುತ್ತಿನ ಮತ ಎಣಿಕೆ ಮುಗಿಯುತ್ತಿದ್ದಂತೆ ಮುನ್ನಡೆಯೂ ಹೆಚ್ಚಾಗುತ್ತಿದೆ.
ನಾಲ್ಕನೇ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದ ಬಿಜೆಪಿ ಗಾಯಿತ್ರಿ ಸಿದ್ದೇಶ್ವರ ಅವರು ಮತ್ತೆ ಹಿನ್ನೆಡೆ ಅನುಭವಿಸುತ್ತಿದ್ದಾರೆ. ಹಾವು ಏಣಿ ಐಟ ಮುಂದುವರಿದಿದ್ರೂ ನಾಲ್ಕನೇ ಸುತ್ತಿನ ಬಳಿಕ ಡಾ. ಪ್ರಭಾ ಮಲ್ಲಿಕಾರ್ಜುನ್ ಮುನ್ನಡೆ ಕಾಯ್ದುಕೊಳ್ಳುತ್ತಲೇ ಇದ್ದಾರೆ.