SUDDIKSHANA KANNADA NEWS/ DAVANAGERE/ DATE-02-07-2025
ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಅವಾಸ್ 2.0 ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಂಟಿ ಮಹಿಳೆಯರು, ಅಂಗವಿಕಲರು , ಹಿರಿಯ ನಾಗರಿಕರು, ತೃತೀಯ ಲಿಂಗಿಗಳು, ಎಸ್‍ಸಿ, ಎಸ್‍ಟಿ, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ಸ್ವಚ್ಚತಾ ಕಾರ್ಮಿಕರು, ಪಿಎಂ ಎಸ್‍ಎ ವಿನಿಧಿ ಯೋಜನೆಯಡಿ
ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕೈಗಾರಿಕರು,
ವಲಸೆ ಬಂದ ಕುಟುಂಬದವರು ತಮ್ಮ ಅರ್ಜಿಗಳನ್ನು URL:http://pmayurban.gov.in ಜುಲೈ 15 ರೊಳಗಾಗಿ ಸಲ್ಲಿಸಬಹುದೆಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.
