Site icon Kannada News-suddikshana

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ: ನ.15 ಜೋಳ ಬೆಳೆ ವಿಮೆ ನೋಂದಣಿಗೆ ಕೊನೆ ದಿನ

SUDDIKSHANA KANNADA NEWS/ DAVANAGERE/ DATE:11-11-2024

ಬಳ್ಳಾರಿ: ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಹಿಂಗಾರು ಹಂಗಾಮಿಗೆ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದ್ದು, ಮಳೆಯಾಶ್ರಿತ ಜೋಳ ಬೆಳೆಗೆ ವಿಮೆಗೆ ನೋಂದಾಯಿಸಕೊಳ್ಳಲು ನ.15 ಕೊನೆಯ ದಿನವಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ರೈತರಿಗೆ ನೈಸರ್ಗಿಕ ಪ್ರಕೃತಿ ವಿಕೋಪಗಳಿಂದಾಗಿ ಬೆಳೆ ಹಾನಿಯಾದರೆ ವಿಮಾ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ.

ಬೆಳೆ ವಿಮೆಗೆ ಕೊನೆಯ ದಿನ:

ಜೋಳ ಬೆಳೆಗೆ ನ.15. ಕುಸುಮೆ, ಜೋಳ, ಮೆಕ್ಕೆಜೋಳ, ಸೂರ್ಯಕಾಂತಿ ಬೆಳೆಗಳಿಗೆ ಡಿ.16 ಆಗಿದೆ. ಕಡಲೆ ಬೆಳೆಗೆ ಡಿ.31.

ಬೆಳೆಗಳ ವಿಮೆ ಮಾಡಿಸಿಕೊಳ್ಳಲು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ, ಯಾವುದೇ ಸ್ಥಳೀಯ ಬ್ಯಾಂಕ್/ಸಾರ್ವಜನಿಕ ಸೇವಾ ಕೇಂದ್ರಗಳಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ವಿಮಾ ಸಂಸ್ಥೆಯ ತಾಲ್ಲೂಕು ಪ್ರತಿನಿಧಿ ಮೊ.7996453241 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version