Site icon Kannada News-suddikshana

ಪತಿಯನ್ನು ಕೊಲ್ಲುವುದಾಗಿ ಬೆದರಿಸಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರ

ಬೆಂಗಳೂರು: ಪತಿಯನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಸಿ ಜೆಡಿಎಸ್ ಪಕ್ಷದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದು ಎಸ್‌ಐಟಿ ತನಿಖೆಯಲ್ಲಿ ದೃಢಪಟ್ಟಿದೆ.

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರಿಗೆ ಸರ್ಕಾರ ಹಂಚಿಕೆ ಮಾಡಿದ್ದ ಹಾಸನದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಅತಿಥಿ ಗೃಹದಲ್ಲಿ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾರೆ. ಇನ್ನು ಪ್ರಜ್ವಲ್ ರೇವಣ್ಣ ಅವರು ಮೇಲೆ ಹಲವಾರು ಬಾರಿ ಅತ್ಯಾಚಾರ ಮಾಡಿದ್ದಲ್ಲದೇ ಮಹಿಳೆಗೆ ವಿಡಿಯೋ ಕರೆ ಕೂಡ ಮಾಡುತ್ತಿದ್ದರು. ವಿಡಿಯೋ ರೆಕಾರ್ಡ್ ಮಾಡಿಕೊಂಡು ಬೆದರಿಸಿ ಹಲವು ಬಾರಿ ಅತ್ಯಾಚಾರ ಎಸಗಿದ್ದರು. ಹೊಳೆನರಸೀಪುರದ ಮನೆಗೂ ಕರೆಸಿ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿರುವುದು ಸಾಬೀತಾಗಿದೆ. 2020ರಿಂದ 2023ರವರೆಗೂ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಎಸಗಿದ ಆರೋಪದಲ್ಲಿ ಬಂಧನವಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ 3ನೇ ಚಾರ್ಜ್​ಶೀಟ್ ಸಲ್ಲಿಕೆಯಾಗಿದೆ. ಜಿ. ಪಂ. ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆ ಪೂರ್ಣಗೊಳಿಸಿದ ಎಸ್‌ಐಟಿ 1691 ಪುಟಗಳ ಚಾರ್ಜ್​ಶೀಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ. ಎಸ್‌ಐಟಿ ಸಲ್ಲಿಸಿರುವ ಚಾರ್ಜ್​ಶೀಟ್ ನಲ್ಲಿ ಪ್ರಜ್ವಲ್ ರೇವಣ್ಣ ಅವರ ಕೃತ್ಯ ಬಯಲಾಗಿದೆ.

Exit mobile version