ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್‌- ಇಬ್ಬರನ್ನು ಬಂಧಿಸಿದ ಎಸ್‌ಐಟಿ

On: May 28, 2024 5:37 PM
Follow Us:
---Advertisement---

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವಿಡಿಯೋ ಹರಿಬಿಟ್ಟವರನ್ನು ಕೊನೆಗೂ ಎಸ್​ಐಟಿ ಬಂಧಿಸಿದೆ.

ಆರೋಪಿಗಳಾದ ನವೀನ್ ಗೌಡ, ಚೇತನ್ ​ಎನ್ನಲಾಗಿದೆ. ವಿಡಿಯೋ ವೈರಲ್​ ಮಾಡಿದ್ದವರನ್ನು ಬಂಧಿಸದಕ್ಕೆ ಎಚ್​ಡಿ ಕುಮಾರಸ್ವಾಮಿ ಅವರು ಸಾಕಷ್ಟು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ದೂರು ದಾಖಲಾದ ಬರೋಬ್ಬರಿ ಒಂದು ತಿಂಗಳು ಬಳಿಕ ಆರೋಪಿಗಳ ಬಂಧನವಾಗಿದೆ.

ಪ್ರಜ್ವಲ್ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ಆರೋಪಿ ನವೀನ್ ಗೌಡ ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿದ್ದ. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿತ್ತು. ಅಲ್ಲದೇ ಭಾರೀ ಚರ್ಚೆಗೆ ಕಾರಣವಾಯಿತು. ಪ್ರಜ್ವಲ್ ರೇವಣ್ಣ ವೀಡಿಯೋ ನೋಡಲು ಈ ವಾಟ್ಸಾಪ್ ಚಾನಲ್ ಫಾಲೋ ಮಾಡಿ ಎಂದು ಫೇಸ್​ಬುಕ್​ನಲ್ಲಿ ಮೊದಲ ಪೋಸ್ಟ್ ಮಾಡಿದ್ದ. ನಂತರ ಸ್ವಲ್ಪ ಹೊತ್ತಿನಲ್ಲೇ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಬಿಡುಗಡೆಗೆ ಕ್ಷಣ ಗಣನೆ ಎಂದು ಮತ್ತೊಂದು ಪೋಸ್ಟ್ ಹಾಕಿದ್ದ. ಇದನ್ನು ಗಮನಿಸಿದ್ದ ಜೆಡಿಎಸ್, ಪೋಸ್ಟ್ ಅನ್ನು ಸ್ಕ್ರೀನ್ ಶಾಟ್ ತೆಗೆದು ಪೊಲೀಸರಿಗೆ ದೂರು ನೀಡಿತ್ತು.

ಇನ್ನು ಪ್ರಕರಣ ದಾಖಲಾಗುತ್ತಿದ್ದಂತೆಯೇ ನವೀನ್​ ಗೌಡ ಫೇಸ್ ಬುಕ್ ಅಕೌಂಟ್ ಡಿಲೀಟ್ ಮಾಡಿಕೊಂಡಿದ್ದ. ಈ ಸಂಬಂಧ ಎಸ್​ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಆದ್ರೆ, ನವೀನ್​ ಗೌಡ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ.

ಲೋಕಸಭಾ ಚುನಾವಣೆಯ ಸಮಯದಲ್ಲಿ ಪೆನ್ ಡ್ರೈವ್‌ನಲ್ಲಿದ್ದ ಅಶ್ಲೀಲ ವಿಡಿಯೊಗಳನ್ನು ವೈರಲ್ ಮಾಡಿದ್ದು ಯಾರೆಂದು ಜೆಡಿಎಸ್​ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​ ನಡುವೆ ಆರೋಪ-ಪ್ರತ್ಯಾರೋಪಗಳು ನಡೆದಿದ್ದವು. ಬಳಿಕ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದೆ ಎನ್ನಲಾಗಿರುವ ಈ ವಿಡಿಯೋವನ್ನ ಹಾಸನ ಜಿಲ್ಲೆ ಬೇಲೂರು ತಾಲೂಕಿನ ನವೀನ್ ಗೌಡ ಅವರು ವೈರಲ್‌ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಈ ನವೀನ್‌ ಗೌಡ ಅವರು ಪ್ರಭಾವಿ ಸಚಿವ ಜಮೀರ್ ಅಹ್ಮದ್‌ ಖಾನ್ ಆಪ್ತ ಎಂದು ಹೇಳಲಾಗುತ್ತಿದೆ.

Join WhatsApp

Join Now

Join Telegram

Join Now

Leave a Comment