Site icon Kannada News-suddikshana

ಲೈಂಗಿಕ ಕಿರುಕುಳ ಪ್ರಕರಣ: ಪ್ರಜ್ವಲ್ ರೇವಣ್ಣ ಜೈಲು ಪಾಲು | ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ

ಬೆಂಗಳೂರು: ಲೈಂಗಿಕ ಕಿರುಕುಳ ಹಾಗೂ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್’ಐಟಿ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

Exit mobile version