ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

BIG EXCLUSIVE: ಮಾಜಿ ಪ್ರಧಾನಿ ಮೊಮ್ಮಗ ಪ್ರಜ್ವಲ್ ರೇವಣ್ಣ ಅತ್ಯಾಚಾರ ಕೇಸ್ ನಲ್ಲಿ ದೋಷಿ: ಮಾಜಿ ಸಂಸದನಿಗೆ ಶಾಕ್!

On: August 1, 2025 2:44 PM
Follow Us:
ಪ್ರಜ್ವಲ್ ರೇವಣ್ಣ
---Advertisement---

SUDDIKSHANA KANNADA NEWS/ DAVANAGERE/ DATE:01_08_2025

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದೆ. ಶಿಕ್ಷೆ ಪ್ರಮಾಣ ನಾಳೆ ಪ್ರಕಟವಾಗಲಿದೆ.

READ ALSO THIS STORY: ಇಂದಿನಿಂದ UPI ನಿಯಮ ಬದಲಾವಣೆ: PhonePe, Google Pay, Paytm ಬಳಸ್ತೀರಾ ಹಾಗಾದ್ರೆ ಈ ಐದು ಅಂಶ ತಿಳಿದುಕೊಳ್ಳಿ

ಕೆ.ಆರ್. ನಗರ ಮಹಿಳೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರನ್ನು ಪೊಲೀಸರು ಕೋರ್ಟ್ ಗೆ ಕರೆ ತಂದಿದ್ದರು. ಕೋರ್ಟ್ ನಲ್ಲಿ ತದೇಕಚಿತ್ತದಿಂದ ಪ್ರಜ್ವಲ್ ರೇವಣ್ಣ ಆಲಿಸಿದರು.

ಮಾಜಿ ಸಚಿವ ಮತ್ತು ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಕಳೆದ 14 ತಿಂಗಳಿನಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು.

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ನಾಲ್ಕು ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಒಂದರ ತೀರ್ಪು ಪ್ರಕಟಗೊಂಡಿದೆ.

ಪ್ರಸ್ತುತ ಮತ್ತು ಮಾಜಿ ಸಂಸದರು, ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗಾಗಿ ವಿಶೇಷ  ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ಗೂಗಲ್ ನಕ್ಷೆಗಳ ಡೇಟಾ, ತಾಂತ್ರಿಕ ಪುರಾವೆಗಳು ಮತ್ತು ಎಫ್‌ಎಸ್‌ಎಲ್ ವರದಿಗಳ ಕುರಿತು ಸ್ಪಷ್ಟೀಕರಣವನ್ನು ಕೋರಿದ್ದರು. ಈ ಸಾಕ್ಷ್ಯ ಮಾನ್ಯವಾದ ಕಾರಣ ಪ್ರಜ್ವಲ್ ರೇವಣ್ಣನಿಗೆ ಶಿಕ್ಷೆ ವಿಧಿಸಿದೆ.

ಈ ಸುದ್ದಿಯನ್ನೂ ಓದಿ: ಮಾಜಿ ಗುಮಾಸ್ತನ ಸಂಬಳ 15,000: 24 ಮನೆ, 40 ಎಕರೆ ಭೂಮಿ ಸೇರಿ ಈತ ಹೊಂದಿದ್ದ ಅಕ್ರಮ ಆಸ್ತಿ ಕಂಡು ಅಧಿಕಾರಿಗಳೇ ಶಾಕ್!

ಪ್ರಜ್ವಲ್ ಅವರ ತೋಟದ ಮನೆಯಲ್ಲಿ ಮಾಜಿ ಮನೆಕೆಲಸದವಳ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊರಿಸಲಾಗಿತ್ತು. ಸಂತ್ರಸ್ತೆ ಏಪ್ರಿಲ್ 28, 2024 ರಂದು ಹಾಸನದ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ
ದೂರು ದಾಖಲಿಸಿದ್ದರು.

ತೀರ್ಪು ಪ್ರಕಟಿಸುವ ಮೊದಲು, ನ್ಯಾಯಾಲಯವು ಎರಡೂ ಕಡೆಯ ವಕೀಲರಿಂದ ಕೆಲವು ಸ್ಪಷ್ಟೀಕರಣಗಳನ್ನು ಕೇಳಿತ್ತು. ಮೊಬೈಲ್ ಸ್ಥಳ ಡೇಟಾ ಮತ್ತು ಇತರ ತಾಂತ್ರಿಕ ಪುರಾವೆಗಳ ಕುರಿತು ವಿವರಣೆಗಳನ್ನು ಅದು ನೀಡುವಂತೆ ಹೇಳಿತ್ತು.

ಸ್ಪಷ್ಟೀಕರಣದ ಅಗತ್ಯವಿದ್ದ ಕಾರಣ ಜುಲೈ 30 ರಂದು ತೀರ್ಪು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದರು. ಹಾಗಾಗಿ ಇಂದಿಗೆ ಮುಂದೂಡಿದ್ದರು. ನ್ಯಾಯಾಲಯದ ಮುಂದೆ ಹಾಜರುಪಡಿಸಲಾದ ಜೆಡಿಎಸ್
ವರಿಷ್ಠ ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಬಿಗಿ ಭದ್ರತೆಯಲ್ಲಿ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಗಿತ್ತು.

READ ALSO THIS STORY: ಕ್ರೆಡಿಟ್ ಕಾರ್ಡ್ ಸಾಲ ಉತ್ತಮವೋ… ವೈಯಕ್ತಿಕ ಸಾಲ ಬೆಸ್ಟ್…?

ಮಾಜಿ ಸಚಿವ ಮತ್ತು ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರನ್ನು ಕಳೆದ 14 ತಿಂಗಳಿನಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ. ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಒಂದು ದಿನದ ನಂತರ ಬೆಳಕಿಗೆ ಬಂದ ಬಹು ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಅವರು ಪ್ರಮುಖ ಆರೋಪಿ.

ಸಾಮಾಜಿಕ ಮಾಧ್ಯಮಗಳಲ್ಲಿ ಬಹು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ತೋರಿಸುವ ಅಶ್ಲೀಲ ವೀಡಿಯೊ ತುಣುಕುಗಳು ವೈರಲ್ ಆಗಿದ್ದವು. ಇಂಥ ವೀಡಿಯೊಗಳನ್ನು ಹೊಂದಿರುವ ಪೆನ್ ಡ್ರೈವ್‌ಗಳನ್ನು ಹಾಸನದಲ್ಲಿ ಹಂಚಲಾಗಿತ್ತು. ಆನಂತರ ಪೊಲೀಸರು ವಶಪಡಿಸಿಕೊಂಡಿದ್ದರು. ನಂತರ ಪ್ರಜ್ವಲ್ ಏಪ್ರಿಲ್ 27, 2024 ರಂದು ದೇಶದಿಂದ ಎಸ್ಕೇಪ್ ಆಗಿದ್ದರು.

ಪ್ರಕರಣಗಳ ದಾಖಲಾದ ನಂತರ, ರಾಜ್ಯ ಸರ್ಕಾರವು ಅವರ ವಿರುದ್ಧದ ಎಲ್ಲಾ ಆರೋಪಗಳ ತನಿಖೆಗಾಗಿ ಸಿಐಡಿ ಅಡಿಯಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಅನ್ನು ರಚಿಸಿತ್ತು. ಪ್ರಜ್ವಲ್ ರೇವಣ್ಣ ಅವರನ್ನು ಮೇ 31, 2024 ರಂದು
ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿದ್ದಂತೆ ಬಂಧಿಸಲಾಗಿತ್ತು.

ಪ್ರಜ್ವಲ್ ರೇವಣ್ಣರ ಮೊಬೈಲ್ ನಲ್ಲಿ ನಾಲ್ಕು ನೂರಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ಫೋಟೋ, ವಿಡಿಯೋಗಳು ಇದ್ದವು ಎಂಬ ಆರೋಪ ಕೇಳಿಬಂದಿತ್ತು. ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರು ಪ್ರಜ್ವಲ್ ರೇವಣ್ಣ ವಿರುದ್ಧ ಚುನಾವಣೆ ವೇಳೆ ವಾಗ್ದಾಳಿ ನಡೆಸಿದ್ದರು. ಮಾತ್ರವಲ್ಲ, ಸಾಮೂಹಿಕ ಅತ್ಯಾಚಾರಿ ಎಂದು ಕರೆದಿದ್ದರು. ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷವು ಅಸ್ತ್ರವಾಗಿ ಬಳಸಿಕೊಂಡು ದೇಶಾದ್ಯಂತ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದವು.

ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರು ಸಹ ಪ್ರಜ್ವಲ್ ರೇವಣ್ಣ ಕರ್ನಾಟಕಕ್ಕೆ ವಾಪಸ್ ಬರದಿದ್ದಾಗ ಪತ್ರ ಬರೆದು ವಾಪಸ್ ಬಂದು ಕಾನೂನಿಗೆ ಗೌರವಿಸುವಂತೆ ಹೇಳಿದ್ದರು. ಆನಂತರ ಪ್ರಜ್ವಲ್ ರೇವಣ್ಣ ಕರ್ನಾಟಕಕ್ಕೆ ಬಂದಿದ್ದಾಗ ಬಂಧಿಸಲಾಗಿತ್ತು. ಈ ವಿಚಾರ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ವಾಕ್ಸಮರಕ್ಕೂ ಕಾರಣವಾಗಿತ್ತು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment