SUDDIKSHANA KANNADA NEWS/ DAVANAGERE/ DATE:18-10-2023
ದಾವಣಗೆರೆ: 2024ರ ಲೋಕಸಭೆ ಚುನಾವಣೆಗೆ ಉಳಿದಿರುವುದು ಇನ್ನು ಕೆಲವೇ ತಿಂಗಳುಗಳು ಮಾತ್ರ. ಈಗಾಗಲೇ ಬಿಜೆಪಿಯು ರಣಕಹಳೆ ಮೊಳಗಿಸಲು ಎಲ್ಲಾ ಸಿದ್ದತೆ ಮಾಡಿಕೊಳ್ಳುತ್ತಿದೆ. ಈ ಬೆಳವಣಿಗೆ ಮಧ್ಯೆ, ಶ್ರೀರಾಮಸೇನೆ ರಾಷ್ಟ್ರೀಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಅವರು ಮೋದಿ ಗೆಲ್ಲಿಸಿ ದೇಶ ಉಳಿಸಿ ಅಭಿಯಾನ ಆಯೋಜಿಸುವ ಮೂಲಕ ಕುತೂಹಲ ಕೆರಳಿಸಿದ್ದಾರೆ.
Read Also This Story:
Davanagere: 13 ವರ್ಷದ ಕ್ರೀಡಾಪಟು ಗರಡಿಮನೆಯಲ್ಲಿ ಆತ್ಮಹತ್ಯೆಗೆ ಕಾರಣವೇನು…?
ದಾವಣಗೆರೆಯಲ್ಲಿ ಈ ವಿಷಯ ತಿಳಿಸಿದ ಪ್ರಮೋದ್ ಮುತಾಲಿಕ್, ನವೆಂಬರ್ ತಿಂಗಳಿನಲ್ಲಿ ರಾಜ್ಯಾದ್ಯಂತ ಈ ಅಭಿಯಾನ ನಡೆಸುವ ಗುರಿ ಹೊಂದಲಾಗಿದೆ. ಈಗಾಗಲೇ ಸಾಧು ಸಂತರು, ವಿವಿಧ ಮಠಗಳ ಮಠಾಧೀಶರು ಸೇರಿದಂತೆ ಹಿಂದೂ ಸಂಘಟನೆಗಳ ಪ್ರಮುಖರು ಹಾಗೂ ಪ್ರಖರ ಹಿಂದುತ್ವವಾದಿಗಳ ಸಂಪರ್ಕ ಮಾಡಲಾಗಿದ್ದು, ಅವರ ಒಪ್ಪಿಗೆಗೆ ಕಾಯಲಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಬೆಳಗಾವಿಯಿಂದ ಈ ಆಂದೋಲನ ಶುರು ಆಗಲಿದೆ ಎಂದು ತಿಳಿಸಿದರು.
ರಾಜ್ಯದ 224 ಕ್ಷೇತ್ರಗಳಲ್ಲಿಯೂ ಪ್ರವಾಸ ನಡೆಸುತ್ತೇನೆ. ಸಭೆ, ಸಮಾರಂಭ, ರ್ಯಾಲಿ ನಡೆಸಲಾಗುವುದು. ಸ್ಥಳೀಯರ ಜೊತೆಗೆ ಚರ್ಚೆ, ಸಂವಾದ ನಡೆಸುತ್ತೇವೆ. ಬೈಕ್ ರ್ಯಾಲಿ, ಪಾದಯಾತ್ರೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಂಥ ನಾಯಕತ್ವ ಬೇಕು. ಅಭಿವೃದ್ಧಿ, ದೇಶ ಸುರಕ್ಷಿತವಾಗಿರಲು ಮೋದಿ ಅವರಂಥವರು ಬೇಕೇ ಬೇಕು. ಹಿಂದುತ್ವ ಉಳಿಯಬೇಕು. ಹಿಂದೂಗಳಿಗೆ ದೇಶದಲ್ಲಿ ರಕ್ಷಣೆ
ಸಿಗಬೇಕಾದರೆ ಮೋದಿ ಅವರಂಥವರಿಂದ ಮಾತ್ರ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕರ್ನಾಟಕದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಒಂದೇ. ಭ್ರಷ್ಟಾಚಾರ, ಭ್ರಷ್ಟ ಆಡಳಿತಕ್ಕೆ ರಾಜ್ಯದ ಜನರು ಕೇವಲ 66 ಸ್ಥಾನಗಳನ್ನು ನೀಡುವ ಮೂಲಕ ಉತ್ತರ ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ನಾಯಕತ್ವ ಎಂಬುದೇ
ಇಲ್ಲ ಎಂಬುದು ಸಾಬೀತಾಗಿದೆ ಎಂದು ತಿಳಿಸಿದರು.