ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜ.19ಕ್ಕೆ ಮಾಗನಹಳ್ಳಿಯಲ್ಲಿ ವಿವಿಧ ದೇವಸ್ಥಾನಗಳ ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣ

On: January 17, 2025 9:56 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:17-01-2025

ದಾವಣಗೆರೆ: ಮಾಳಗೊಂಡನಹಳ್ಳಿ ಹಾಗೂ ಮಾಗಾನಹಳ್ಳಿ ಗ್ರಾಮದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ಶ್ರೀ ಕೋಟೆ ಆಂಜನೇಯ ಸ್ವಾಮಿ ಮತ್ತು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವರ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಹಾಗೂ ಮಾಳಗೊಂಡನಹಳ್ಳಿ ನೂತನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ದಾವಣಗೆರೆ ಉತ್ತರ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಹಾಗೂ ಮಾಳಗೊಂಡನಗಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಬಿ.ಕೆ ಪರಶುರಾಮ್ ತಿಳಿಸಿದರು.

ಜ.19 ರಂದು ಶ್ರೀ ಶ್ರೀ ಶ್ರೀ 1008 ಶ್ರೀಸತ್ಯಾತ್ಮ ತೀರ್ಥ ಪಾದಂಗಳವರ ಆಶೀರ್ವಚನದಲ್ಲಿ ಹಾಗೂ ಶ್ರೀ ಶ್ರೀ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದ ಅವರು
ಸಮಾರಂಭದ ವೇದಿಕೆ ಕಾರ್ಯಕ್ರಮವನ್ನು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್ ಮಲ್ಲಿಕಾರ್ಜುನ್ ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಸಂಸದರಾದ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರು ಭಾಗಿಯಾಗುವರು ಎಂದರು.

ಕಾರ್ಯಕ್ರಮಕ್ಕೆ ಇನ್ನು ಅನೇಕ ಗಣ್ಯರು, ಮುಖಂಡರು ಆಗಮಿಸುತ್ತಿದ್ದು ಕಾರ್ಯಕ್ರಮದ ಯಶಸ್ವಿಗೆ ಸರ್ವರೂ ಕೈ ಜೋಡಿಸುವಂತೆ ಅವರು ಕೋರಿದರು.

ಈ ವೇಳೆ ಮಾಳಗೊಂಡನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಡಿ.ಕುಮಾರ್, ಸಂಘದ ಪದಾಧಿಕಾರಿಗಳು, ದೇವಸ್ಥಾನದ ಆಡಳಿತ ಮಂಡಳಿಯವರು, ದೇವಸ್ಥಾನಗಳ ಸಮಿತಿಯವರು, ಗ್ರಾಮಗಳ ಮುಖಂಡರುಗಳು ಹಾಗೂ ಇತರರು ಉಪಸ್ಥಿತರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment