SUDDIKSHANA KANNADA NEWS/ DAVANAGERE/ DATE: 29-01-2025
ದಾವಣಗೆರೆ: ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಫೆಬ್ರವರಿ 8 ಮತ್ತು 9 ರಂದು ನಡೆಯಲಿರುವ ವಾಲ್ಮೀಕಿ ಮಹರ್ಷಿ ಜಾತ್ರೆಗೆ ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಅವರನ್ನು ವಾಲ್ಮೀಕಿ ಗುರುಪೀಠದ ಪ್ರಸನಾನಂದ ಪುರಿ ಸ್ವಾಮೀಜಿಯವರು ಆಹ್ವಾನಿಸಿದರು.
ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ಫೆಬ್ರುವರಿ 8 ಮತ್ತು 9 ರಂದು ನಡೆಯಲಿರುವ ವಾಲ್ಮೀಕಿ ಜಾತ್ರೆಯ ಆಮಂತ್ರಣ ಪತ್ರಿಕೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ರಾಜು ಗೌಡ, ಎಸ್.ಟಿ ಮೋರ್ಚಾದ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಎಸ್. ಟಿ. ಮೋರ್ಚಾದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಬಿಜೆಪಿ ಯುವ ಮುಖಂಡರಾದ ಜಿ. ಎಸ್ ಅನಿತ್ ಕುಮಾರ್, ಜಿ. ಎಲ್. ರಾಜೀವ್ ಹಾಗೂ ಇನ್ನೂ ವಾಲ್ಮೀಕಿ ಸಮಾಜದ ಮುಖಂಡರು ಹಾಜರಿದ್ದರು.